ತುಮಕೂರು

ಬರದಿಂದ ತಿಪಟೂರು ತಾಲೂಕಿನ ಕೃಷಿಗೆ 2858 ಲಕ್ಷ ನಷ್ಟ

Published On :

ತಿಪಟೂರು: ತಾಲೂಕಿನಾದ್ಯಂತ ಈ ವರ್ಷ ಮಳೆಯ ಪ್ರಮಾಣ ಸಾಧಾರಣವಾಗಿದ್ದು, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಮಳೆ ಬಿದ್ದಿದ್ದರಿಂದ ಮುಂಗಾರು ಬೆಳೆಗಳಲ್ಲಿ ಕಾಳುಕಟ್ಟುವ ಹಂತದಲ್ಲಿ ತೇವಾಂಶದ ಕೊರತೆಯಿಂದಾಗಿ ಈ ಬಾರಿಯೂ ಮುಂಗಾರು ಬೆಳೆಗಳ ಇಳುವರಿ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
 ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಸರಾಸರಿ ಬಿತ್ತನೆ ಕ್ಷೇತ್ರವು 30500 ಹೆಕ್ಟೇರ್ ಇದ್ದು, ಇದರಲ್ಲಿ 25975 ಹೆಕ್ಟೇರ್ ಬೆಳೆ ಬಿತ್ತನೆಯಾಗಿದ್ದು, ಪೂರ್ವ ಮುಂಗಾರು ಹಂಗಾಮಿನಲ್ಲಿ ಮಳೆಯ ಅಭಾವದ ಕಾರಣ 4525 ಹೆಕ್ಟೇರ್ನಲ್ಲಿ ಬೆಳೆಗಳ ಬಿತ್ತನೆಯಾಗಿರುವುದಿಲ್ಲ. ಇನ್ನುಳಿದ 18094.7 ಹೆಕ್ಟೇರ್ ಪ್ರದೇಶದ ಬೆಳೆಯು ಶೇ.50ಕ್ಕಿಂತ ಹೆಚ್ಚು ಇಳುವರಿ ನಷ್ಟ ಹೊಂದಿದೆ. ಬರದಿಂದ ಒಟ್ಟು 2858ಲಕ್ಷ ನಷ್ಟ ಉಂಟಾಗಿದ್ದು, ಈ ಬಗ್ಗೆ ಸರ್ಕಾರದಿಂದ ರು.727.46ಲಕ್ಷ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.
 ತಾಲೂಕಿನಾದ್ಯಂತ ಇರುವ ರೈತ ಸಂಪರ್ಕಕೇಂದ್ರಗಳಲ್ಲಿ ಕೃಷಿ ಪರಿಕರಗಳಾದ ಸಸ್ಯ ಸಂರಕ್ಷಣಾ ಔಷಧಿಗಳು, ಕೃಷಿ ಯಂತ್ರೋಪಕರಣಗಳು, ತುಂತುರು ನೀರಾವರಿ ಉಪಕರಣಗಳು ಹಾಗೂ ಪಿವಿಸಿ ಪೈಪುಗಳನ್ನು
ರಿಯಾಯಿತಿ ದರದಲ್ಲಿ ವಿತರಿಸಲಾಗುವುದು. ಆಸಕ್ತಿಯುಳ್ಳ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಹೆಚ್ಚಿನ ಸೌಲಭ್ಯ ಮತ್ತು ಮಾಹಿತಿಗಳನ್ನು ಪಡೆಯಬೇಕೆಂದು ತಿಳಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.