ಪರಿಹಾರ ಹಂತದಲ್ಲಿ ಪೌರಕಾರ್ಮಿಕರ ಸಮಸ್ಯೆ
ಚಿಕ್ಕನಾಯಕನಹಳ್ಳಿ: ವೇತನ ನೀಡದ ಪರಿಣಾಮ ಪೌರಕಾರ್ಮಿಕರು ಪಟ್ಟಣದಲ್ಲಿ ಸ್ವಚ್ಛತೆ ಕೈಬಿಟ್ಟು ಅಘೋಷಿತ ಮುಷ್ಕರ ಕೈಗೊಂಡಿದ್ದಾರೆಂಬ ವರದಿಗೆ ಪುರಸಭೆ ಮುಖ್ಯಾಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ವೇತನ ಸಮಸ್ಯೆ ನಿವಾರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಡಿ.29ರಂದು ಪಟ್ಟಣದ ಬೀದಿಗಳಲ್ಲಿ ಕಸದ ರಾಶಿ ಬಿದ್ದಿರುವ ಬಗ್ಗೆ ಪತ್ರಿಕೆ ವರದಿಯಾಗಿತ್ತು. ಸ್ವಚ್ಛತಾ ಗುತ್ತಿಗೆ ನೌಕರರ ಬಾಕಿಯಿರುವ ವೇತನವನ್ನು ಸಂಪೂರ್ಣವಾಗಿ ಪಾವತಿಸಿದೆ. ನೌಕರರ ಬ್ಯಾಂಕ್ ಖಾತೆಗೆ ಜಮಾ ಮಾಡಲು ಸಂಬಂಧಿಸಿದ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಈ ಬಗ್ಗೆ 5 ಲಕ್ಷ ರು.ಗಳಿಗೂ ಅಧಿಕ ಮೊತ್ತದ ಟೆಂಡರನ್ನು ಸರ್ಕಾರದ ನಿಯಮದಂತೆ ಇ-ಟೆಂಡರ್ ಮೂಲಕ ಮಾಡಬೇಕಿದ್ದು, ಇದಕ್ಕೆ ಸಂಬಂದಿಸಿದಂತೆ ಪುರಸಭೆ ಎಂಜಿನಿಯರ್ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಿರುತ್ತಾರೆ. ಜನವರಿ ಅಂತ್ಯಕ್ಕೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಇದರ ತರುವಾಯ ನೌಕರರಿಗೆ ಗುತ್ತಿಗೆ ಹಣವನ್ನು ಹೊಸ ದರದಂತೆ ಪಾವತಿಸಲಾಗುವುದು. ಇದರಲ್ಲಿ ಜಿಲ್ಲಾಧಿಕಾರಿಯವರು ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ತೊಡಕು ಇಲ್ಲ. ಪಟ್ಟಣದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಜಿಲ್ಲಾಧಿಕಾರಿಯವರಿಂದ ಎಲ್ಲಾ ಕ್ರಿಯಾ ಯೋಜನೆಗಳಿಗು ಮಂಜೂರಾತಿ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಪುರಸಭೆ ಎಂಜಿನಿಯರ್ ಅವರಿಂದ ನಡೆಯಬೇಕಿದೆ. ಇದಲ್ಲದೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಲ್ಲಿ 4 ಕೋಟಿ ರು.ಗಳ ಕ್ರಿಯಾಯೋಜನೆ ಮಂಜೂರಾಗಿದ್ದು, ಈ ಬಗ್ಗೆ ಕಾಮಗಾರಿ ಪ್ರಾರಂಭಮಾಡಬೇಕಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

