ಅನುದಾನಿತ ಶಾಲಾ ಶಿಕ್ಷಕರಿಗೆ ಅನುದಾನ ನೀಡುವಂತೆ ಒತ್ತಾಯ
ತಿಪಟೂರು: ಸರ್ಕಾರಗಳು ಶಿಕ್ಷಣ ನೀತಿಯ ಬಗ್ಗೆ ಉದಾಸೀನತೆ ಮತ್ತು ನಿರ್ಲಕ್ಷತೆ ತೋರುತ್ತಿದ್ದು, ಸರ್ಕಾರ ಕೊಟ್ಟ ಮಾತನ್ನು ಮರೆತಂತೆ ಕಾಣುತ್ತಿದೆ. ಅನುದಾನಿತ ಶಾಲಾ, ಕಾಲೇಜು ಶಿಕ್ಷಕರಿಗೆ ಅನುದಾನ ನೀಡಬೇಕೆಂದು ತೀರ್ಮಾನವಾಗಿದ್ದರೂ ಸರ್ಕಾರ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯದಿಂದಿರುವುದು ಸರಿಯಲ್ಲ ಎಂದು ರಾಜ್ಯ ಶಿಕ್ಷಕರ ನೌಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಿವಪ್ಪ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೆ ಶಿಕ್ಷಕರ ಸಂಘಟನೆಗಳು ಪ್ರಬಲವಾಗಿದ್ದವು. ಜೊತೆಗೆ ಶಿಕ್ಷಕರ ಪ್ರತಿನಿಧಿಗಳು ವಿಧಾನಪರಿಷತ್ತಿನಲ್ಲಿ ಶಿಕ್ಷಕರ ಪರವಾಗಿ ಹೋರಾಟ ಮಾಡಿ ಬೇಡಿಕೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದ್ದವು. ಇತ್ತೀಚೆಗೆ ಶಿಕ್ಷಕ ಸಂಘಟನೆಗಳು, ಶಿಕ್ಷಕರ ಪ್ರತಿನಿಧಿಗಳು ಶಿಕ್ಷಕರ ಸಮಸ್ಯೆ ಬಗೆಹರಿಸುವಲ್ಲಿ ದಿವ್ಯ ನಿರ್ಲಕ್ಷ್ಯ ತೋರುತ್ತಿರುವುದರಿಂದ ಶಿಕ್ಷಕರು ಇಂದು ವಿಷ ಸೇವನೆ ಮಾಡುವಂತಹ ಪರಿಸ್ಥಿತಿ ಬಂದಿರುವುದು ಶೋಚನೀಯ ಸಂಗತಿಯಾಗಿದೆ. ಅನುದಾನರಹಿತ ಕಾಲೇಜು ಶಿಕ್ಷಕರಿಗಲ್ಲದೆ ಅನುದಾನಕ್ಕೊಳಪಟ್ಟ ಶಾಲಾ ಕಾಲೇಜುಗಳಲ್ಲಿ ನಿವೃತ್ತರಾದ ಬೋಧಕ, ಬೋಧಕೇತರ ಸಿಬ್ಬಂದಿ ನೇಮಿಸಿಕೊಳ್ಳಲು ಅನುಮತಿ ನೀಡುತ್ತಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ದುಡಿಯುತ್ತಿರುವ ನೌಕರರಿಗೆ ತೀವ್ರ ತೊಂದರೆಯಾಗುತ್ತಿದ್ದು, ಈ ಬಗ್ಗೆ ಸರ್ಕಾರ ತಕ್ಷಣ ಗಮನಹರಿಸಿ ಅನುದಾನರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಬೇಕು. ಇಲ್ಲವಾದಲ್ಲಿ ಒಕ್ಕೂಟದ ವತಿಯಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮಾಡಲಾಗುವುದೆಂದು ಶಿವಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಹಿಂದೂ ಜಾಗರಣಾ ವೇದಿಕೆಯಿಂದ ನಾಳೆ ಪ್ರತಿಭಟನೆ
ತುಮಕೂರು: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ರಾಘವೇಂದ್ರ ಅಜೆಕಾರ್ ಅವರ ಮೇಲೆ ಹೂಡಿರುವ ಮತೀಯ ಗೂಂಡಾ ಕಾಯಿದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಜನವರಿ 1 ರಂದು ನಗರದ ಟೌನ್ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಬಸವರಾಜ್ ತಿಳಿಸಿದ್ದಾರೆ. ನಗರದ ಕೆ.ಆರ್. ಬಡಾವಣೆಯ ಶ್ರೀರಾಮಮಂದಿರ ಆವರಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಒಂದು ಗುಂಪು ಹಿಂದುತ್ವವಾದಿಗಳ ಧಮನಕಾರಿ ಪ್ರವೃತ್ತಿ ಹುಟ್ಟಿಹಾಕುತ್ತಿದ್ದು, ಅದನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಪಕ್ಷಾತೀತವಾಗಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

