ತುಮಕೂರು

ವಿಕಲಚೇತನರ ಸಾಧನೆಗೆ ಅಡ್ಡಿಯಲ್ಲ: ರಮಾನಂದ ಚೈತನ್ಯ ಸ್ವಾಮೀಜಿ

Published On :

ಮಧುಗಿರಿ:  ವಿಕಲ ಚೇತನತೆ  ಸಾಧನೆಗೆ ಅಡ್ಡಿಯಲ್ಲ ಎಂದು ತಗ್ಗಿಹಳಿ ಶ್ರೀರಾಮಕೃಷ್ಣಶ್ರಮದ ರಮಾನಂದ ಚೈತನ್ಯಸ್ವಾಮೀಜಿ ತಿಳಿಸಿದರು.
ಪಟ್ಟಣದ ಬಸವ ಭಾರತಿ ವಿಕಲ ಚೇತನ ಶಾಲೆಯ  ಮಕ್ಕಳಿಗೆ ಮಹಾತ್ಮ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಸ್ಥೆಯ ವತಿಯಿಂದ ವಿಶ್ವ ವಿಕಲ ಚೇತನರ ದಿನಾಚರಣೆ ಪ್ರಯುಕ್ತ  ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.
ಕರ್ನಾಟಕ ವಿಕಲಚೇತನ ಆಯುಕ್ತ ರಾಜಣ್ಣ ಅವರು ತಮ್ಮ ಕೈ ಕಾಲು ಇಲ್ಲದಿದ್ದರೂ ಕೂಡ  ಆ ಭಗವಂತ ಯಾವುದೋ ಮಾರ್ಗದಲ್ಲಿ ಒಂದು ಪ್ರತಿಭೆ ನೀಡಿ ಸನ್ಮಾರ್ಗದಲ್ಲಿ ನಡೆಯುವ ನಿಟ್ಟಿನಲ್ಲಿ ಸಾಧಿಸಿ ತೋರಿಸಿದ್ದಾರೆ. ಆ ವ್ಯಕ್ತಿ ವಿಕಲ ಚೇತನರಿಗೆ ಆದರ್ಶವಾಗಿದ್ದಾರೆ ಎಂದು ಅಂಗವಿಕಲರಿಗೆ ಚೈತನ್ಯ ತುಂಬಿದರು.
ಪಿಎಸೈ ಅಂಬರೀಶ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಕಲಚೇತನರು ಸಾಮಾನ್ಯರಿಗಿಂತ  ಯಾವುದೇ ರಂಗಗಳಲ್ಲೂ ಕಮ್ಮಿ ಇಲ್ಲ ಎಂಬುದನ್ನು ಸಾಧನೆ ಮೂಲಕ ಅನೇಕರು ದೇಶದಲ್ಲಿ ತೋರಿಸಿ ಕೊಟ್ಟಿದ್ದಾರೆ. ಹಾಗಾಗಿ ವಿಕಲಚೇತನರು ಕೀಳರಿಮೆ ಬಿಟ್ಟು  ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಸಕಾಲಕ್ಕೆ ಸದ್ಬಳಕೆ ಮಾಡಿಕೊಂಡು ಸ್ವಾಭಿಮಾನದ ಬದುಕು ಸಾಗಿಸುವ ನಿಟ್ಟಿನಲ್ಲಿ ಸಮಾಜದ ಮುಖ್ಯವಾಹಿನಿ ಸೇರಬೇಕು. ಮುಂದಿನ ದಿನಗಳಲ್ಲಿ ನಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡುವುದಾಗಿ ಅಂಬರೀಶ್ ಭರವಸೆ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ಕಾರ್ಪೇಹಳ್ಳಿ ಮಹಾದೇವ್, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಕೇಬಲ್ ಸುಬ್ಬು, ವಿಪ್ರ ಯುವ ವೇದಿಕೆ ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ್, ಕೆಜೆಪಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಕೃಷ್ಣಮೂರ್ತಿ,ದಿಲೀಪ್, ಶಾರದ ಮುಂತಾದವರು  ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.