ತುಮಕೂರು

'ಶಿರಾದಲ್ಲಿ ಗುಬ್ಬಿ ವೀರಣ್ಣ ಕಲಾ ಭವನ ನಿರ್ಮಿಸಿ

Published On :

ಶಿರಾ: ಶಿರಾದಲ್ಲಿ ನಾಟಕ ರತ್ನ ಗುಬ್ಬಿ ವೀರಣ್ಣ ಕಲಾ  ಭವನವನ್ನು ಸರ್ಕಾರ ಕೂಡಲೇ ನಿರ್ಮಾಣ ಮಾಡಬೇಕು ಎಂದು ನಾಟಕರತ್ನ ಡಾ.ಗುಬ್ಬಿ ವೀರಣ್ಣ ರಂಗಭೂಮಿ ಕಲಾವಿದರ ರಾಜ್ಯ ಒಕ್ಕೂಟದ ಅಧ್ಯಕ್ಷ ಗುಬ್ಬಿ ವೀರೇಶ್ ಒತ್ತಾಯಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ  ತಾಲೂಕು ಘಟಕದ ನೂತನ ಪದಾಧಿಕಾರಿ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು, ಶಿರಾ ಭಾಗದಲ್ಲಿ  ಅನೇಕ ಕಲೆ-ಕಲಾವಿದರಿದ್ದು, ಬಡ ಕಲಾವಿದರಿಗೆ ಮಾಶಾಸನ ಲಭ್ಯವಾಗದೆ ಪರಿತಪಿಸುವಂತಾಗಿದೆ.
ಈ ಭಾಗದ ಕಲಾವಿದರನ್ನು ಕನ್ನಡ ಮತ್ತು ಸಂಸ್ಕೃತಿ  ಇಲಾಖೆ ಕಡೆಗಣಿಸಿದೆ ಎಂದು ಆರೋಪಿಸಿದರು.
ಮಾಸಾಶನಕ್ಕೆ ಇಲ್ಲಿನ ಕಲಾವಿದರು ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಿದರೂ ಈತನಕ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಇಲ್ಲಿನ ನಗರಸಭೆಯು ಕೂಡಲೇ ಪಟ್ಟಣದ ಪ್ರಮುಖ ವೃತ್ತದಲ್ಲಿ ಗುಬ್ಬಿ ವೀರಣ್ಣನವರ ನಾಮಕರಣ ಮಾಡಬೇಕು ಎಂದು ಇದೆ ಸಂದರ್ಭದಲ್ಲಿ ಒತ್ತಾಯಿಸಿದರು.
ಪದಾಧಿಕಾರಿಗಳ ಆಯ್ಕೆ: ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಮಹಂತೇಶ್, ಗೌರವಾಧ್ಯಕ್ಷರಾಗಿ ತಿಪ್ಪೇಸ್ವಾಮಿ, ಉಪಾಧ್ಯಕ್ಷರಾಗಿ ಎಲ್.ಓ.ಲಕ್ಷ್ಮೀಕಾಂತ, ಎಲ್.ರಾಧ,  ಕರೇಗೌಡ, ಮಹೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಜಗನ್ನಾಥ್, ಸಹ ಕಾರ್ಯದರ್ಶಿಯಾಗಿ ಪಿ.ರಂಗಸ್ವಾಮಿ, ಚಂದ್ರಶೇಖರ್, ಎಲ್.ಕೃಷ್ಣಮೂರ್ತಿ, ಮಾಧ್ಯಮ ಕಾರ್ಯದರ್ಶಿಯಾಗಿ ರವಿಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಉಮೇಶ್, ಸಹ ಕಾರ್ಯದರ್ಶಿಯಾಗಿ ನಂದಿನಿ, ಖಜಾಂಚಿಯಾಗಿ ನಾಗರಾಜು, ಕಾನೂನು ಸಲಹೆಗಾರರನ್ನಾಗಿ ಸಿದ್ದರಾಜು, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಗುರುಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು.
ರಾಜ್ಯ ಘಟಕದ ಕಾರ್ಯದರ್ಶಿ ಕೋಟೆ ಭೀಮಶೆಟ್ಟಿ, ಮಹಿಳಾ ಕಾರ್ಯದರ್ಶಿ ಹುಳಿಯಾರು ಗೌರಮ್ಮ, ತುಮಕೂರು ಜಿಲ್ಲಾಧ್ಯಕ್ಷ ಎಸ್.ಮಲ್ಲಿಕಾರ್ಜುನ್, ಫೋಟೋ ಜಗದೀಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.