ಸೊಗಡು ವಿರುದ್ಧ ಸ್ಪರ್ಧೆಗೆ ಸಿದ್ಧ: ಹುಲಿನಾಯ್ಕರ್
ತುಮಕೂರು: ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ತಾವೂ ಒಬ್ಬ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಸಚಿವ ಸೊಗಡು ಶಿವಣ್ಣ ವಿರುದ್ದ ಸ್ಫರ್ಧಿಸಲು ಸಿದ್ಧವಿರುವುದಾಗಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಘೋಷಿಸಿದರು.
ಈ ಸಂಬಂಧ ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ನಿಂದ ಸ್ಪರ್ಧಿಸಲು 20 ಮಂದಿ ಯೋಗ್ಯ ಅಭ್ಯರ್ಥಿಗಳಿದ್ದಾರೆ. ಅವರಲ್ಲಿ ನಾನೂ ಒಬ್ಬನಾಗಿದ್ದೇನೆ. ಆದರೆ, ಟಿಕೆಟ್ ನೀಡುವುದು, ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದರು.
ಹೇಗೆ ಸಾಧ್ಯ: ಜಾತ್ಯತೀತ ಜನತಾದಳದ ಪ್ರಾಥಮಿಕ ಸದಸ್ಯತ್ವ ಪಡೆಯದವರಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಗೆಳೆಯರ ಬಳಗದ ಅಧ್ಯಕ್ಷ ಗೋವಿಂದರಾಜು ಅವರಿಗೆ ಜೆಡಿಎಸ್ನಿಂದ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೆಜೆಪಿ ಭ್ರಷ್ಟರ ಗುಂಪು: ಬಿಜೆಪಿಯಿಂದ ಸಿಡಿದು ಬಂದಿರುವ ಯಡಿಯೂರಪ್ಪ ಹಾಗೂ ಬೆಂಬಲಿಗರು ಹೆಸರನ್ನಷ್ಟೇ ಬದಲಿಸಿದ್ದಾರೆ. ಆದರೆ, ಧೋರಣೆ ಮಾತ್ರ ಅದೇ. ಕಳೆದ 4 ವರೆ ವರ್ಷಗಳಲ್ಲಿ ಆಗಿರುವ ರಾಜ್ಯದಲ್ಲಾಗಿರುವ ಅರಾಜಕತೆ, ಭ್ರಷ್ಟಾಚಾರದಲ್ಲಿ ಬಿಜೆಪಿ ಪಾಲು ಎಷ್ಟಿದೆಯೋ, ಅಷ್ಟೇ ಪಾಲು ಕೆಜೆಪಿಯದ್ದೂ ಕೂಡ ಇದೆ. ಹೀಗಾಗಿ ಕೆಜೆಪಿ ಭಿನ್ನ ಪಕ್ಷ ಎನಿಸುತ್ತಿಲ್ಲ. ಅದೊಂದು ಭ್ರಷ್ಟರ ಗುಂಪು ಹುಲಿನಾಯ್ಕರ್ ಲೇವಡಿ ಮಾಡಿದರು.
ಬಯಲಾದ ಬಿಜೆಪಿ ವಂಚನೆ: ರಸ್ತೆ, ನೀರು, ನೀರಾವರಿ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಒಂದೇ ಒಂದು ಬಾರಿ ಅಧಿಕಾರ ಕೊಟ್ಟು ನೋಡಿ, ಬದಲಾವಣೆ ಮಾಡಿ ತೋರಿಸುತ್ತೇವೆ ಎಂದು ವಿದ್ಯಾವಂತರನ್ನು ಮರಳು ಮಾಡಿ ಅಧಿಕಾರ ಹಿಡಿದ ಬಿಜೆಪಿ ಮಂದಿಯದ್ದು ಭ್ರಷ್ಟಾಚಾರ ಮಾಡಿದ್ದೇ ಸಾಧನೆಯಾಗಿದೆ. ಬಿಜೆಪಿ ಸರ್ಕಾರ ಭಾರೀ ಭ್ರಷ್ಟಾಚಾರದ ಹಗರಣಗಳಲ್ಲಿ ಸಿಲುಕಿ ತಮ್ಮ ನಿಜ ಬಣ್ಣ ಬಯಲು ಮಾಡಿಕೊಂಡಿದೆ ಎಂದು ಮಾರ್ಮಿಕವಾಗಿ ನುಡಿದರು. ಜಿಪಂ ಅಧ್ಯಕ್ಷೆ ಪ್ರೇಮಾ ಮಹಾಲಿಂಗಪ್ಪ, ಸದಸ್ಯ ಸುಧಾಕರ್ ಲಾಲ್, ನಗರಸಭಾ ಸದಸ್ಯ ನರಸೀಯಪ್ಪಮುಖಂಡರಾದ ವಿಜಯ್ಕುಮಾರ್, ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

