ತುಮಕೂರು

ನೀರಿಗಾಗಿ ಇಂದು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಪಾದಯಾತ್ರೆ

Published On :

ಶಿರಾ: ಬುಕ್ಕಾಪಟ್ಟಣ ಹೋಬಳಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಹೇಮಾವತಿ ನದಿ ಮೂಲದಿಂದ ನೀರು ತರುವಂತೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಎರಡನೇ ಹಂತದ ಹೋರಾಟವಾಗಿ ಬುಕ್ಕಾಪಟ್ಟಣ ಹೋಬಳಿಯ ಜನರು ಮಂಗಳವಾರ ಬುಕ್ಕಾಪಟ್ಟಣದಿಂದ ಶಿರಾ ಪಟ್ಟಣಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ನೀರಾವರಿ ಹೋರಾಟ ಸಮತಿ ತಿಳಿಸಿದೆ.  ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೋಬಳಿಯ ಮುಖಂಡರು ಜಿಲ್ಲೆಯ ಹಲವು ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರು ಹರಿಸುತ್ತಿದ್ದು ಬುಕ್ಕಾಪಟ್ಟಣ ಹೋಬಳಿಯ ಬಗ್ಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ದೂರಿದರು. ನೀರಿನ ಬೇಡಿಕೆ ಶೀಘ್ರ ಈಡೇರಿಸದಿದ್ದರೆ ಮುಂದಿನ ಹಂತದ ಹೋರಾಟವಾಗಿ ಬುಕ್ಕಾಪಟ್ಟಣದಲ್ಲಿ ಸರಣಿ ಧರಣಿ ಕೂರಲಾಗುವುದು ಎಂದು ತಿಳಿಸಿದರು.
ಜಿ.ಪಂ. ಮಾಜಿ ಸದಸ್ಯ ರಾಮಚಂದ್ರಪ್ಪ, ತಾ.ಪಂ. ಮಾಜಿ  ಅಧ್ಯಕ್ಷ ಬುಕ್ಕಾಪಟ್ಟಣ ಮಂಜುನಾಥ್, ಪಿ.ಎಲ್.ಡಿ. ಬ್ಯಾಂಕ್ ನಿರ್ದೇಶಕ ಎಚ್.ಜಿ. ಲಿಂಗಯ್ಯ ಸೇರಿದಂತೆ ಹಲವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.