ತುಮಕೂರು

ಯುವ ಸಮುದಾಯದಲ್ಲಿ ಮಾನವೀಯ ಮೌಲ್ಯಕುಸಿಯುತ್ತಿದೆ: ಶಾಸಕ ನಾಗೇಶ್

Published On :

ತಿಪಟೂರು: ಯುವ ಸಮುದಾಯದಲ್ಲಿ ಆಧುನಿಕತೆಯ ಜೀವನಶೈಲಿ ಹೆಚ್ಚಾದಂತೆ ಮಾನವೀಯ ಮೌಲ್ಯಗಳು ಕುಸಿಯುತ್ತಿರುವುದಕ್ಕೆ ಮುಖ್ಯ ಕಾರಣವಾಗಿದೆ ಎಂದು ಶಾಸಕ ಬಿ.ಸಿ. ನಾಗೇಶ್ ತಿಳಿಸಿದರು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಇಲಾಖೆ ಅನುದಾನದ ಜೊತೆ  ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಕಾರದೊಂದಿಗೆ ನಿರ್ಮಿಸಿರುವ ನೂತನ ಪ್ರಯೋಗಾಲಯ, ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಸರ್ಕಾರ ಒತ್ತು ನೀಡಿದೆ. ಈ ಕಾಲೇಜಿನ ಕೊಠಡಿಗಳ ಕೊರತೆ ನೀಗಿಸಲು 16 ಹೊಸ ಕೊಠಡಿ ನಿರ್ಮಿಸಲಾಗಿದೆ. ಮೂರು ಕೊಠಡಿಗಳ ನಿರ್ಮಾಣಕ್ಕೆ ಅನುದಾನ ದೊರೆತಿದೆ. ಮುಂದಿನ ಶೈಕ್ಷಣಿಕ ವರ್ಷದ ವೇಳೆ ಅವು ಪೂರ್ಣಗೊಂಡರೆ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ತರಗತಿಗಳನ್ನು ಏಕಕಾಲದಲ್ಲಿ ನಡೆಸಲು ಸಾಧ್ಯವಾಗುತ್ತದೆ ಎಂದರು.
ಡಿಡಿಪಿಐ ಬಿ.ಮೋಹನ್ ಕುಮಾರ್ ಮಾತನಾಡಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಗುಣಮಟ್ಟದ ಶಿಕ್ಷಣ ಅನಿವಾರ್ಯ. ಸಕಲರಿಗೂ ಉತ್ತಮ ಶಿಕ್ಷಣ ದೊರಕಿಸಲು ಸೌಲಭ್ಯ ದೊರಕುತ್ತಿದ್ದು, ಶಿಕ್ಷಕರ ಪರಿಶ್ರಮ ಹೆಚ್ಚಬೇಕಿದೆ ಎಂದರು.
ಬಿಇಓ ಮನಮೋಹನ್, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಧಿ ಸಂಘದ ಡಾ.ಚಂದ್ರಮೌಳಿ, ಪ್ರಾಂಶುಪಾಲ ರಂಗನಾಥ್, ಉಪಪ್ರಾಂಶುಪಾಲ ಎಚ್.ಕೆ.ಸಿದ್ದರಾಜು, ಎಚ್.ಆರ್. ಮುರುಳೀಧರ್, ಉಪನ್ಯಾಸಕರಾದ ರಘು, ಶಿವಕುಮಾರ್, ದೊಡ್ಡೇಗೌಡ, ಪ್ರಸನ್ನ ಕುಮಾರ್ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.