ತುಮಕೂರು

ವೆಂಕಟರಮಣಪ್ಪ ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ನೀಡಬೇಡಿ

Published On :




ಪಾವಗಡ: ಪಕ್ಷ ವಿರೋಧಿ ಚಟವಟಿಕೆಗಳಲ್ಲಿ ತೊಡಗಿಸಿಕೊಂಡು ಪಕ್ಷದಿಂದ ಅನರ್ಹಗೊಂಡ ಶಾಸಕ ವೆಂಕಟರಮಣಪ್ಪ ಹಾಗೂ ಕುಟುಂಬ ವರ್ಗದವರಿಗೆ ಟಿಕೆಟ್ ನೀಡಬಾರದೆಂದು ಎಐಸಿಸಿ ಹಾಗೂ ಕೆಪಿಸಿಸಿಗೆ ದೂರು ನೀಡಿರುವುದಾಗಿ ತಾಲೂಕು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಸಭಾ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಾ.ಡಿ.ಪರಮೇಶ್ ನಾಯಕ್ ತಿಳಿಸಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ವೆಂಕಟಮಣಪ್ಪ ಅವರಿಗೆ ಟಿಕೆಟ್ ನಿರಾಕರಿಸಿದಾಗ ಪಕ್ಷ ವಿರೋಧಿ ಚಟವಟಿಕೆಗಳಲ್ಲಿ ತೊಡಗಿಸಿಕೊಂಡು ಬಂಡಾಯವಾಗಿ ಸ್ವರ್ಧಿಸಿದ್ದರು. ಗೆದ್ದನಂತರ ಅವರು ಬಿಜೆಪಿ ಸರ್ಕಾರದ ರಚನೆಗೆ ಕಾರಣರಾದರು. ಬಿಜೆಪಿಯಿಂದ ಅನರ್ಹಗೊಂಡಾಗ ಜೆಡಿಎಸ್‌ನಲ್ಲಿ ಗುರುತಿಸಿಕೊಂಡರು. ನಂತರ ಈಗ ಶೆಟ್ಟರ್ ಸರ್ಕಾರಕ್ಕೆ ಬೆಂಬಲ ನೀಡಲು ಮುಂದಾಗಿದ್ದು ಪಕ್ಷದಿಂದ ಅನರ್ಹಗೊಂಡ ಅವರು ಸಂವಿಧಾನದ ತತ್ವ ಸಿದ್ಧಾಂತಗಳನ್ನು ಗಾಳಿಗೆ ತೂರುವ ಮೂಲಕ ಈಗ ಕಾಂಗ್ರೆಸ್‌ನಲ್ಲಿ ಟಿಕೆಟ್ ಪಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಅವರ ಪಕ್ಷ ವಿರೋಧಿ  ಚಟವಟಿಕೆಗಳ ಬಗ್ಗೆ ಕೆಪಿಸಿಸಿಗೆ ಮನವರಿಕೆ ಮಾಡಿ ಮುಖಂಡರ ಸಹಕಾರ ಪಡೆದು ನಿಯೋಗದೊಂದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ವಿವರಿಸುವುದಾಗಿ ಅವರು ತಿಳಿಸಿದರು.
ವಿಧಾನ ಸಭೆ ಚುನಾವಣೆಗೆ ಟಿಕೆಟ್ ಪಡೆಯಲು ಪಕ್ಷದಲ್ಲಿ ಗುರುತಿಸಿಕೊಂಡ ತಾಲೂಕಿನ 6 ಮಂದಿ ನಿಷ್ಠಾವಂತ ಅಭ್ಯರ್ಥಿಗಳು ಕೆಪಿಸಿಸಿಗೆ ಈಗಾಗಲೇ ಅರ್ಜಿ ಸಲ್ಲಿಸಿದ್ದು ಇವರಲ್ಲಿ  ಯಾರಿಗಾದರೂ ಟಿಕೆಟ್ ನೀಡಲಿ ಎಂದರು.
ತಾಲೂಕಿನ ಕಾಂಗ್ರೆಸ್ ಹಿರಿಯ ಮುಖಂಡ ಟಿಕೆಟ್ ಆಕಾಂಕ್ಷಿ ಕೋರ್ಟ್ ನರಸಪ್ಪ ಮಾತನಾಡಿ ವೆಂಕಟರಮಣಪ್ಪ ಪಕ್ಷ ವಿರೋಧಿ ಚಟವಟಿಕೆ ಹಾಗೂ ಪುತ್ರ ವೆಂಕಟೇಶ್ ವೈಖರಿ ಬಗ್ಗೆ ಕಿಡಿಕಾರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.