ತುಮಕೂರು

ಪತ್ನಿ ಕೊಂದು ಮಾನಸಿಕ ಅಸ್ವಸ್ಥ ಆತ್ಮಹತ್ಯೆ

Published On :


ಶಿರಾ:  ಮಾನಸಿಕ ಅಸ್ವಸ್ಥ ಪತಿಯೊಬ್ಬ ತನ್ನ ಪತ್ನಿಯನ್ನು ಕೊಂದು ನಂತರ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ರಂಗನಹಳ್ಳಿಯಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ಜಯಮ್ಮ (35) ಎಂದು ಗುರುತಿಸಲಾಗಿದ್ದು, ಕೊಂದು ವಿಷ ಸೇವಿಸಿದವನನ್ನು ಲಕ್ಷ್ಮನಾಯ್ಕ (45) ಎಂದು ಗುರುತಿಸಲಾಗಿದೆ.
10 ವರ್ಷಗಳ ಹಿಂದೆ ಮೆದುಳು ಜ್ವರದಿಂದ ಬಳಲುತ್ತಿದ್ದ ಲಕ್ಷ್ಮನಾಯ್ಕ ಮಾನಸಿಕ ಅಸ್ವಸ್ಥನಾಗಿದ್ದ ಎಂದು  ಪೊಲೀಸ್ ಮೂಲಗಳು ತಿಳಿಸಿವೆ. ನಾಲ್ಕೈದು ವರ್ಷಗಳ ಹಿಂದೆ ಹೊಟ್ಟೆನೋವು ಎಂದು ಕುಡುಗೋಲಿನಿಂದ ತನ್ನ ಹೊಟ್ಟೆ ಕೊಯ್ದುಕೊಂಡಿದ್ದ ಈ ವ್ಯಕ್ತಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಬೆಳಿಗ್ಗೆ ಎಲ್ಲರೊಂದಿಗೆ ಚೆನ್ನಾಗಿಯೇ ಇದ್ದ. ಆದರೆ, ಇದ್ದಕ್ಕಿದ್ದಂತೆ ಪತ್ನಿ ಜಯಮ್ಮನ ಮೇಲೆ ಪಿಕಾಸಿಯಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ತಲೆಗೆ ತೀವ್ರ ಪೆಟ್ಟಾದ ಜಯಮ್ಮ ಅಸುನೀಗಿದರು.
ಮೊದಲೇ ಮಾನಸಿಕ ಅಸ್ವಸ್ಥನಾದ ಲಕ್ಷ್ಮನಾಯ್ಕ ಘಟನೆಯಿಂದ ವಿಚಲಿತನಾಗಿ ತೋಟಕ್ಕೆ ಹೋಗಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿದ ತಾವರೆಕೆರೆ ಠಾಣಾಧಿಕಾರಿ ಪ್ರಶಾಂತ್ ಅವರು ಪ್ರಕಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.