ತುಮಕೂರು

10ರಂದು ಸ್ತ್ರೀರೋಗ ತಜ್ಞರಿಂದ ತಪಾಸಣೆ (ಸುದ್ದಿ ಸಂಕ್ಷೇಪ)

Published On :

ಶಿರಾ:  ಇಲ್ಲಿನ ವಾಸವಿ ಮಹಿಳಾ ಮಂಡಳಿ, ವಾಸವಿ ವಿದ್ಯಾಸಂಸ್ಥೆ, ಬೆಂಗಳೂರಿನ ಡಾ.ರಮೇಶ್ ಆಸ್ಪತ್ರೆ ಆಶ್ರಯದಲ್ಲಿ ಫೆ.10ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.30 ರವರೆಗೆ ಪಟ್ಟಣದ ಮುಖ್ಯ ರಸ್ತೆಯ ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ಸ್ತ್ರೀರೋಗಗಳು ಮತ್ತು ಗರ್ಭಕೋಶ ಸಮಸ್ಯೆಗಳ ಉಚಿತ ತಪಾಸಣೆ ಮತ್ತು ಸ್ಕ್ಯಾನಿಂಗ್ ಸೇವಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ನಾಗಲಕ್ಷ್ಮಿ ತಿಳಿಸಿದ್ದಾರೆ.
ಸದರಿ ಶಿಬಿರದಲ್ಲಿ ಸ್ತ್ರೀರೋಗ ತಜ್ಞರ ತಂಡ ಮಹಿಳೆಯರನ್ನು ಕಾಡುವ ಕಾಯಿಲೆಗಳಿಗೆ ಉಚಿತ ತಪಾಸಣೆ ಚಿಕಿತ್ಸೆ ಸ್ಕ್ಯಾನಿಂಗ್ ಅಗತ್ಯವಿದ್ದವರಿಗೆ ಉಚಿತ ಔಷಧಿ ನೀಡಲಾಗುವುದು. ಸಾರ್ವಜನಿಕರು ಸದರಿ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಆಯೋಜಕರು ತಿಳಿಸಿದ್ದಾರೆ.
ಇಂದು, ನಾಳೆ ಸಾಂಸ್ಕೃತಿಕ ಹಬ್ಬ
ತುಮಕೂರು:  ನಗರದ ಶ್ರೀಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜ.8 ಮತ್ತು 9 ರಂದು ಸಾಂಸ್ಕೃತಿಕ ಹಬ್ಬ ಅಭಿವ್ಯಕ್ತಿ-2013 ಕಾರ್ಯಕ್ರಮ ಹಮ್ಮಿಕೊಂಡಿದೆ. 8ರಂದು ಕಾಲೇಜಿನ ಆವರಣದಲ್ಲಿ ಬೆಳಗ್ಗೆ 10ಕ್ಕೆ ಚಲನಚಿತ್ರ ನಿರ್ದೇಶಕ ಪವನ್ ಒಡೆಯರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎಲ್. ವೈದೇಶ್ವರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗುಡಿಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಚ್.ಬಿ. ಪಂಚಾಕ್ಷರಯ್ಯ ಭಾಗವಹಿಸಲಿದ್ದಾರೆ.
'ಭೂಮಿ ಹಕ್ಕಿಗಾಗಿ ಸಂಘಟಿತರಾಗಲಿ'
ತುಮಕೂರು:  ಸ್ಲಂ ನಿವಾಸಿಗಳು ತಮ್ಮ ಹಕ್ಕುಗಳನ್ನು ಪಡೆಯಲು ಸಂಘಟಿತರಾಗಿ ಹೋರಾಟ ಮಾಡಬೇಕೆಂದು ಚಿಂತಕ ಕೆ.ದೊರೈರಾಜು ಸಲಹೆ ನೀಡಿದರು. ನಗರದ ಬೆಳಗುಂಬ ರಸ್ತೆ ಬದಿ ಸ್ಲಂ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನಬದ್ಧ ಮೂಲಭೂತ ಹಕ್ಕುಗಳನ್ನು ಪಡೆಯಬೇಕು.  ಹೋರಾಟದ ಮೂಲಕವೇ ಭೂಮಿ ಹಕ್ಕನ್ನು ಪಡೆಯಬೇಕು ಮತ್ತು ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡಲು ಪೋಷಕರು ಕಾಳಜಿ ವಹಿಸಬೇಕೆಂದು ಪೋಷಕರಿಗೆ ಕಿವಿ ಮಾತು ಹೇಳಿದರು. ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ, ಪ್ರಸ್ತುತ ವ್ಯವಸ್ಥೆಯು ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದವರನ್ನು ಸ್ಲಂಗಳಲ್ಲಿ ವಾಸ ಮಾಡುವಂತೆ ಮಾಡಿದೆ. ಆದ್ದರಿಂದ ನಾವು ಸಾಮಾಜಿಕ ನ್ಯಾಯ ಪಡೆಯಲು ಸಂಘಟಿತ ಹೋರಾಟ ಮಾಡಬೇಕು ಎಂದರು. ಚಡಾ. ಮುರಳೀಧರ್ ಮಾತನಾಡಿದರು. ಇದೇ ಸಂದರ್ಭ ಸ್ಥಳೀಯ ಶಾಖೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಗಂಗಮ್ಮ, ಕಾರ್ಯದರ್ಶಿಯಾಗಿ ಗೀತಾ, ಸದಸ್ಯರಾಗಿ ಶಭಾನ, ಸಿದ್ಧರಾಜು, ಪುಟ್ಟರಾಜು, ವಕ್ಕೋಡಿ, ಜಯಮ್ಮ, ಪಾಪಣ್ಣ, ಸೈಯದ್ ಅಸ್ಲಾಂ ಅವರನ್ನು ಆಯ್ಕೆಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.