ಅನಿರ್ದಿಷ್ಟಾವಧಿ ಧರಣಿ ಆರಂಭ

Updated on: 

ತುಮಕೂರು: ರಾಷ್ಟ್ರದಲ್ಲೇ ವಿನೂತನವಾಗಿರುವ ಕುಡಿಯುವ ನೀರಿನ ಕರ್ನಾಟಕ ವಾಟರ್ ಗ್ರಿಡ್ ಯೋಜನೆ ಜಾರಿಗೆ ಒತ್ತಾಯಿಸಿ ತುಮಕೂರಿನ ಟೌನ್ಹಾಲ್ ಮುಂಭಾಗದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭವಾಗಿದೆ.
ತುಮಕೂರು ಸೇರಿದಂತೆ ಮಧ್ಯ ಕರ್ನಾಟಕದ 9 ಜಿಲ್ಲೆಯ 43 ತಾಲೂಕುಗಳಿಗೆ ನೀರೊದಗಿಸುವ ಈ ವಿನೂತನ ಯೋಜನೆ ಜಾರಿಗೆ ಒತ್ತಾಯಿಸಿ ನಿರಂತರ ಒತ್ತಡವಿದ್ದರೂ ರಾಜ್ಯ ಬಿಜೆಪಿ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಧರಣಿ ಆರಂಭಗೊಂಡಿದೆ.
ಮಧ್ಯ ಕರ್ನಾಟಕದ 9 ಜಿಲ್ಲೆಗಳ 43 ತಾಲೂಕುಗಳ ಕುಡಿಯುವ ನೀರಿನ ಬವಣೆ ನೀಗಲು ಇರುವ ಮಾರ್ಗ ಇದೊಂದೇ ಆಗಿದ್ದು, ಯೋಜನೆ ಜಾರಿಗೆ ತುಮಕೂರಿನಲ್ಲಿ ಪಕ್ಷಾತೀತವಾಗಿ ಹೋರಾಟ ಆರಂಭವಾಗಿದೆ.
ಯೋಜನೆ ಜಾರಿಯಾಗುವವರೆಗೆ ಪ್ರತಿಭಟನಾ ಸ್ಥಳದಿಂದ ಕದಲುವುದಿಲ್ಲ ಎಂಬ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ.
ಸಂಸದ ಜಿ.ಎಸ್. ಬಸವರಾಜ್ ಪ್ರತಿಭಟನೆಗೆ ಚಾಲನೆ ನೀಡಿದರು. ಜಿಲ್ಲಾ ಕೆಜೆಪಿ ಅಧ್ಯಕ್ಷ ರವಿ ಹೆಬ್ಬಾಕ, ಕೆಜೆಪಿ ಜಿಲ್ಲಾ ವಕ್ತಾರ ಸದಾಶಿವಯ್ಯ, ಕೆಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಪಿ. ಗಂಗರಾಜು ಸೇರಿದಂತೆ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com