ಎತ್ತಿನಹೊಳೆಗೆ ಅಡ್ಡಿ ನಿವಾರಣೆ: ಬೊಮ್ಮಾಯಿ
ವಿಧಾನಸಭೆ: ರಾಜ್ಯ ಸರ್ಕಾರದ ಮಹತ್ವದ ಎತ್ತಿನಹೊಳೆ ಯೋಜನೆಗೆ ಇದ್ದ ಏಕೈಕ ಅಡ್ಡಿ ನಿವಾರಣೆಯಾಗಿದೆ. ಕೇಂದ್ರ ಜಲ ಆಯೋಗವು ಯೋಜನೆಗೆ ಪರಿಸರ ಅನುಮತಿ ನೀಡಿದೆ.
ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಎಚ್.ಸಿ. ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇತ್ತೀಚೆಗೆ ನಡೆದ ಕೇಂದ್ರ ಜಲ ಆಯೋಗದ ಸಭೆಯಲ್ಲಿ ಎತ್ತಿನಹೊಳೆ ಯೋಜನೆಗೆ ಅನುಮತಿ ನೀಡಲಾಗಿದೆ. ಇದೇ ಅವಧಿಯಲ್ಲಿ ತಮಿಳುನಾಡಿನ ಯೋಜನೆಯೂ ಸೇರಿದ್ದರಿಂದ ಎರಡೂ ಯೋಜನೆಗಳಿಗೆ ಒಟ್ಟಾಗಿ ಅನುಮತಿ ನೀಡಿ ಅಧಿಕೃತವಾಗಿ ಆದೇಶ ಹೊರಡಿಸಲಿದೆ ಎಂದು ತಿಳಿಸಿದರು.
ಬರಪೀಡಿತ ಪ್ರದೇಶಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರೊದಗಿಸಲು 8323.50 ಕೋಟಿ ಮೊತ್ತದ ಎತ್ತಿನಹೊಳೆ ಯೋಜನೆ ರೂಪಿಸಿದ್ದು, ಮೊದಲ ಹಂತದಲ್ಲಿ ಹರವನಹಳ್ಳಿ ವಿತರಣಾ ಕೇಂದ್ರದವರೆಗಿನ 3269.50 ಕೋಟಿ ಮೊತ್ತದ ಏತ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದೆ ಎಂದು ಹೇಳಿದರು.
ಯಾವ ಜಿಲ್ಲೆಯ ಎಷ್ಟು ಕೆರೆಗಳಿಗೆ ನೀರು ಹರಿಸಲಾಗುವುದು ಎಂಬ ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಮೊದಲ ಹಂತದಲ್ಲಿ ಏತ ನೀರಾವರಿ ಯೋಜನೆಗೆ ಅನುಮತಿ ಪಡೆದುಕೊಂಡು ಕಾಮಗಾರಿ ಆರಂಭವಾದರೆ ಯೋಜನೆ ತ್ವರಿತವಾಗಿ ಪೂರ್ಣಗೊಳ್ಳಲು ಸಾಧ್ಯವಾಗುತ್ತದೆ. ಈ ಯೋಜನೆ ಆರಂಭವಾದ ನಂತರ ಕಾಲುವೆ ಕಾಮಗಾರಿ ಆರಂಭಿಸಲಾಗುವುದು. ಇದಕ್ಕಾಗಿ ಸಮೀಕ್ಷೆ ನಡೆಸಲಾಗುತ್ತಿದ್ದು, ವರದಿ ಶೀಘ್ರವೇ ಕೈಸೇರಲಿದೆ ಎಂದು ತಿಳಿಸಿದರು. ಈ ಎಲ್ಲಾ ಕಾಮಗಾರಿಗಳನ್ನು 36 ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

