ತುಮಕೂರು

ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ

Published On :

ತುಮಕೂರು: ಕಾಲೇಜಿಗೆ ಹೋದ ಯುವತಿಯೋರ್ವಳು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಳವನಹಳ್ಳಿ ಗ್ರಾಮದ ವಾಸಿ ವಿನುತಾ ಎಂಬುವರು  ಜ.5 ರಂದು ಬೆಳಿಗ್ಗೆ 8.30 ಕ್ಕೆ ಕಾಲೇಜಿಗೆ ಹೋಗಿಬರುವುದಾಗಿ ಹೇಳಿ ಹೋದವರು ಪುನಃ ವಾಪಸು ಮನೆಗೆ ಹಿಂದಿರುಗಿರುವುದಿಲ್ಲ. ಎಲ್ಲಾ ಕಡೆ ಹುಡುಕಾಡಿದರೂ ಯುವತಿ ಪತ್ತೆಯಾಗಿಲ್ಲ ಎಂದು ಯುವತಿ ತಂದೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವತಿ ಪತ್ತೆಯಾದಲ್ಲಿ ಸಮೀಪದ ಪೊಲೀಸ್ ಠಾಣೆ ಸಂಪರ್ಕಿಸಲು ಕೋರಿದೆ.
ವಿಸ್ತರ ಣಾಧಿಕಾರಿ ಗೈರಿಗೆ ಆಕ್ರೋಶ
ಪಾವಗಡ: ಇಲ್ಲಿನ ಬಿಸಿಎಂ ಇಲಾಖೆಗೆ ನಿಯೋಜಿತರಾದ ವಿಸ್ತಣಾಧಿಕಾರಿಯೊಬ್ಬರು ನಿಗದಿತ ಅವಧಿಯಲ್ಲಿ ಕಚೇರಿಯಲ್ಲಿ ಇಲ್ಲದ ಕಾರಣ ಸಾರ್ವಜನಿಕ ಕೆಲಸಗಳು ಕುಂಠಿತವಾಗುತ್ತಿವೆ ಎಂದು ತಾಲೂಕು ದಂಡೋರ ಅಧ್ಯಕ್ಷ ವಳ್ಳೂರು ನಾಗೇಶ್ ಹಾಗೂ ಮುಖಂಡ ನಾರಾಯಣಪ್ಪ ಆರೋಪಿಸಿದ್ದಾರೆ.  ಸಮಸ್ಯೆ ಇದೇ ರೀತಿ ಮುಂದುವರಿದರೆ ಮಾದಿಗ ದಂಡೋರ ಸಮಿತಿ ವತಿಯಿಂದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ನಾರಾಯಣಪ್ಪ, ನಾಗೇಶ್, ರಾಮಾಂಜಿನಪ್ಪ ಹನುಮಂತರಾಯಪ್ಪ ಮುಂತಾದವರು ಎಚ್ಚರಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.