ವಾಟರ್ಗ್ರಿಡ್: ಪಾದಯಾತ್ರೆಗೆ ನಿರ್ಧಾರ
ತುಮಕೂರು: ಮಧ್ಯಕರ್ನಾಟಕದ 9 ಜಿಲ್ಲೆಗಳಿಂದ ಒಟ್ಟು 43 ತಾಲೂಕುಗಳಿಗೆ ನೀರುಣಿಸುವ ಮಹತ್ವಾಕಾಂಕ್ಷಿ ವಾಟರ್ ಗ್ರಿಡ್ ಕೆನಾಲ್ ಯೋಜನೆ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟಿದ್ದು ಜಿಲ್ಲೆಯಾದ್ಯಂತ ಪಾದಯಾತ್ರೆ ನಡೆಸಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ.
ಯೋಜನೆ ಜಾರಿಯಾಗುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿರುವ ಪ್ರತಿಭಟನಾಕಾರರು ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ.
ಇದರ ಭಾಗವಾಗಿ ತುಮಕೂರಿನ ಟೌನ್ಹಾಲ್ ವೃತ್ತದಿಂದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ವಾಟರ್ಗ್ರಿಡ್ ಕೆನಾಲ್ ಯೋಜನೆ ಸಂಬಂಧ ಸೋಮವಾರ ಸಂಜೆ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ನೀರಾವರಿ ತಜ್ಞ ಪರಮಶಿವಯ್ಯ ಅವರು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಾಟರ್ ಗ್ರಿಡ್ ಕೆನಾಲ್ ಯೋಜನೆಯನ್ನು ಬಜೆಟ್ನಲ್ಲಿ ಸೇರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಭರವಸೆ: ಮತ್ತೊಂದು ಬೆಳವಣಿಗೆಯಲ್ಲಿ ಮಂಗಳವಾರ ಬೆಳಗ್ಗೆ ತುಮಕೂರು ಸಂಸದ ಜಿ.ಎಸ್. ಬಸವರಾಜು ಹಾಗೂ ಅವರ ನಿಯೋಗ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ವಾಟರ್ ಗ್ರಿಡ್ ಕೆನಾಲ್ ಯೋಜನೆ ಜಾರಿಗೆ ಚರ್ಚಿಸಿದರು. ಚರ್ಚೆ ಬಳಿಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಜೆಟ್ನಲ್ಲಿ ಈ ಯೋಜನೆ ಆಕಸ್ಮಿಕವಾಗಿ ಬಿಟ್ಟು ಹೋಗಿದೆ. ಬಜೆಟ್ ಮೇಲೆ ಪ್ರತಿಕ್ರಿಯೆಯಲ್ಲಿ ಈ ಯೋಜನೆಯನ್ನು ಸೇರಿಸುವ ಭರವಸೆ ನೀಡಿದ್ದಾರೆ.
ಈಗ ಎತ್ತಿನಹೊಳೆಗೆ ಸುಮಾರು 200 ಕೋಟಿ ಮೀಸಲಿಡಲಾಗಿದೆ. ಆದರೆ ವಾಟರ್ ಗ್ರಿಡ್ ಕೆನಾಲ್ ಯೋಜನೆಯಾದರೆ 5 ಸಾವಿರ ಕೋಟಿ ರು. ಇಡಬೇಕು. ಆ ಹಣವನ್ನು ಮೀಸಲಿಡಲಿ ಎಂದು ಸಂಸದ ಜಿ.ಎಸ್. ಬಸವರಾಜು ಆಗ್ರಹಿಸಿದ್ದಾರೆ.
ಒಟ್ಟಾರೆಯಾಗಿ ಮಧ್ಯ ಕರ್ನಾಟಕದ 9 ಜಿಲ್ಲೆಗಳಿಂದ ಒಟ್ಟು 43 ತಾಲೂಕುಗಳಿಗೆ ವಾಟರ್ ಗ್ರಿಡ್ನಿಂದಲೇ ನೀರು ಬರಲಿ ಎಂಬುದು ಸಂಸದರ ಪಟ್ಟಾಗಿದೆ. ಅಲ್ಲದೇ ಪೈಪ್ಲೈನ್ ಲಾಬಿಯಿಂದಾಗಿ ಮುಖ್ಯಮಂತ್ರಿಗಳಿಗೆ ಹಾಗೂ ನೀರಾವರಿ ಸಚಿವರಿಗೆ ಕೆಲವರು ದಾರಿ ತಪ್ಪಿಸಿ ಈ ಯೋಜನೆಯನ್ನು ಬಜೆಟ್ನಿಂದ ಕೈ ಬಿಡಿಸಿರಬೇಕು ಎಂದು ಸಂಸದ ಜಿ.ಎಸ್. ಬಸವರಾಜು ಆರೋಪಿಸಿದ್ದಾರೆ.
ಆದರೆ ಬಜೆಟ್ನಲ್ಲಿ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ಸಂದರ್ಭದಲ್ಲಿ ವಾಟರ್ ಗ್ರಿಡ್ ಯೋಜನೆ ಸೇರಿಸುವ ಸ್ಪಷ್ಟವಾಗಿ ಹೇಳುವ ತನಕ ಹೋರಾಟ ಕೈ ಬಿಡುವುದಿಲ್ಲ ಎಂದು ಸಂಸದರು ಎಚ್ಚರಿಸಿದ್ದಾರೆ. ನಾಳೆ, ನಾಡಿದ್ದರಿಂದ ಚಳವಳಿಯನ್ನು ತೀವ್ರಗೊಳಿಸುವುದಾಗಿ ತಿಳಿಸಿದ ಅವರು ತುಮಕೂರು ಜಿಲ್ಲೆಯಾದ್ಯಂತ ಪಾದಯಾತ್ರೆ ನಡೆಸುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಕೆಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ಜ್ಯೋತಿ ಗಣೇಶ್ ಮುಂತಾದವರು ಇದ್ದರು.
ಮುಖ್ಯಾಂಶಗಳು
ಟಿ ಸಿಎಂ ಭೇಟಿ ಮಾಡಿದ ಸಂಸದರು
ಟಿ ಯೋಜನೆ ಸೇರ್ಪಡಿಸುವ ಭರವಸೆ
ಟಿ ಶಾಲಾ ಮಕ್ಕಳು ಪ್ರತಿಭಟನಗೆ ಸಾಥ್
ಟಿ ಭರವಸೆ ಸಿಕ್ಕೋವರೆಗೆ ಹೋರಾಟ ನಿಲ್ಲಲ್ಲ
ಟಿ 9 ಜಿಲ್ಲೆಗಳ 43 ತಾಲೂಕಿಗೆ ಅನುಕೂಲ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

