ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ
ತುಮಕೂರು: ಬೆಲೆ ಏರಿಕೆ ನಿಯಂತ್ರಣ, ಗುತ್ತಿಗೆ ಕಾರ್ಮಿಕ ಪದ್ಧತಿ ರದ್ಧತಿಗೆ, ಕನಿಷ್ಠ ಕೂಲಿಗೆ ಆಗ್ರಹಿಸಿ ಫೆ.20 ಮತ್ತು 21ರಂದು 2 ದಿವಸಗಳ ಕಾಲ ದೇಶವ್ಯಾಪಿ ಕಾರ್ಮಿಕರ ಐಕ್ಯ ಮುಷ್ಕರ ಆಯೋಜಿಸಲಾಗಿದೆ ಎಂದು ಕೇಂದ್ರೀಯ ಕಾರ್ಮಿಕ ಸಂಘಗಳ ಜಂಟಿ ಸಮಿತಿ ತಿಳಿಸಿದೆ.
11 ಕೇಂದ್ರ ಕಾರ್ಮಿಕ ಸಂಘಟನೆಗಳಾದ ಬಿಎಂಎಸ್, ಐಎನ್‌ಟಿಯುಸಿ, ಎಐಟಿ ಯುಸಿ, ಎಚ್‌ಎಂಎಸ್, ಸಿಐಟಿಯು, ಎಲ್‌ಪಿಎಫ್, ಎಐಸಿಸಿಟಿಯು, ಎಐಯು ಟಿಯುಸಿ, ಯುಟಿಯುಸಿ, ಬ್ಯಾಂಕು, ವಿಮಾ, ಸರ್ಕಾರಿ ನೌಕರ ಸಂಘಟನೆಗಳ ನೂರಾರು ಸದಸ್ಯರು 2 ದಿನಗಳ ದೇಶವ್ಯಾಪಿ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆಂದು ಸೈಯದ್ ಮುಜೀಬ್, ಕಂಬೇಗೌಡ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಹೋರಾಟದಲ್ಲಿ 10 ಬೇಡಿಕೆ ರೂಪಿಸಲಾಗಿದೆ. ಕೇಂದ್ರ ಕಾರ್ಮಿಕ ಸಂಘಟನೆಗಳು ದೇಶದ ಕಾರ್ಮಿಕರ, ದುಡಿಯುವ ಜನರ ಬೇಡಿಕೆ ಈಡೇರಿಕೆಗಾಗಿ ನಿರಂತರ ಹೋರಾಟ ನಡೆಸುತ್ತಾ ಬಂದಿವೆ ಎಂದಿದ್ದಾರೆ. ಉದ್ಯೋಗ ಸೃಷ್ಟಿಸಲು,ರಕ್ಷಿಸಲು ಪ್ಯಾಕೇಜ್ ನೀಡುವುದು, ಕಾರ್ಮಿಕ ಕಾನೂನುಗಳ ಕಠಿಣವಾದ ಅನುಷ್ಟಾನ, ಸಾರ್ವತ್ರಿಕವಾಗಿ ಎಲ್ಲಾ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಒದಗಿಸಲು ಹಣಕಾಸು ಸಂಪನ್ಮೂಲ ಒದಗಿಸುವ ಕ್ರಮ ರೂಪಿಸಿ ಅನುಷ್ಠಾನಗೊಳಿಸುವುದು, ಎಲ್ಲರಿಗೂ ನಿವೃತ್ತಿ ವೇತನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

