16ರಿಂದ ಕುರುಬರಹಳ್ಳಿಯಲ್ಲಿ ಎನ್ಎಸ್ಎಸ್ ವಾರ್ಷಿಕ ಶಿಬಿರ
ಶಿರಾ: ತಾಲೂಕಿನ ಬುಕ್ಕಾಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ವಿಶೇಷ ವಾರ್ಷಿಕ ಶಿಬಿರವನ್ನು ಫೆ.16 ರಿಂದ 22 ರವರೆಗೆ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಕುರುಬರಹಳ್ಳಿಯಲ್ಲಿ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ. ಎಲ್.ನಾಗರಾಜು ತಿಳಿಸಿದ್ದಾರೆ.
ಫೆ.16ರಂದು ಶಿಬಿರವನ್ನು ಶಾಸಕ ಸಿ.ಬಿ.ಸುರೇಶ್ಬಾಬು ಉದ್ಘಾಟಿಸುವರು ಶಿಬಿರಾಧಿಕಾರಿ ಪ್ರೊ. ವಿಜಯಕುಮಾರ್, ಪ್ರಾಸ್ತಾವಿಕವಾಗಿ ಮಾತನಾಡುವರು. ಧ್ವಜಾರೋಹಣವನ್ನು ತಹಸೀಲ್ದಾರ್ ಟಿ.ಸಿ. ಕಾಂತರಾಜು ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷೆ ಪ್ರೇಮಾ ಮಹಲಿಂಗಪ್ಪ, ಸದಸ್ಯೆ ಪುಟ್ಟಮಣಿ ಬೊಮ್ಮಣ್ಣ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಎಂ.ಕೊಟ್ರೇಶ್ ಮತ್ತಿತರರು ಹಾಜರಿರುವರು. ಪ್ರೊ. ಜಿ.ಶಾರದಮ್ಮ ಪ್ರತಿಜ್ಞಾವಿಧಿ ಬೋಧಿಸುವರು.
ಫೆ.17ರಂದು ಸಾರ್ವಜನಿಕರಿಗೆ ಕಾನೂನು ಮತ್ತು ಆರ್ಟಿಐ ಕಾಯ್ದೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ, ಫೆ.18ರಂದು ಪರಿಪೂರ್ಣ ಆರೋಗ್ಯಕರ ಜೀವನ ಶೈಲಿ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, ಫೆ.19ರಂದು ಹದಿಹರೆಯದವರ ಆರೋಗ್ಯ ಹಾಗೂ ಎಚ್ಐವಿ ಮತ್ತು ಏಡ್ಸ್ ಬಗ್ಗೆ ಅರಿವು ಕಾರ್ಯಕ್ರಮ, ಫೆ.20ರಂದು ಜನಪದ ಕಲೆ ಮತ್ತು ಸಂಸ್ಕೃತಿ ಬಗ್ಗ ಅರಿವು ಕಾರ್ಯಕ್ರಮ, ಫೆ.21ರಂದು ಅಮೂಲ್ಯ ಅರಣ್ಯ ಸಂಪತ್ತು ಸಂರಕ್ಷಣೆ ಬಗ್ಗೆ ಕಾರ್ಯಕ್ರಮ, ಫೆ.22ರಂದು ಪ್ರಾಚಾರ್ಯ ಪ್ರೊ. ಎಲ್.ನಾಗರಾಜು ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನೆರವೇರಲಿದೆ. ಸಮಾರೋಪ ಭಾಷಣವನ್ನು ಪ್ರೊ. ಮಹಲಿಂಗಯ್ಯ ನಡೆಸಿಕೊಡುವರು. ಸಹ ಶಿಬಿರಾಧಿಕಾರಿಗಳಾಗಿ ಪ್ರೊ. ವಿಜಯಕುಮಾರ್, ಪ್ರೊ. ಬಿ.ಶಾರದಮ್ಮ, ಪ್ರೊ. ಎಂ.ಜೆ. ದಯಾನಂದ್ ಕಾರ್ಯ ನಿರ್ವಹಿಸುವರು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

