ತುಮಕೂರು

ಮಹಿಳೆ ಮೇಲೆ ಹಲ್ಲೆ: ಅಪರಾಧಿಗೆ ಸಜೆ

Published On :

ತುಮಕೂರು: ಮಹಿಳೆಯೊಬ್ಬರ ಮೇಲೆ ಹಲ್ಲೆಗೈದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಅಪರಾಧಿಗೆ ಜಿಲಾ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಎಚ್.ಎಂ. ದೇವರಾಜು ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ತುಮಕೂರು ತಾಲೂಕು ಊರ್ಡಿಗೆರೆ ಹೋಬಳಿ ತಿಮ್ಮನಾಯಕನಹಳ್ಳಿ ಗ್ರಾಮದ ವಾಸಿಯಾದ ಚಂದ್ರಯ್ಯ ಈತನಿಗೆ 2 ವರ್ಷ  ಸಾದಾ ಸಜೆ ಹಾಗೂ 5 ಸಾವಿರ ದಂಡ. ದಂಡ ಕೊಡಲು ತಪ್ಪಿದಲ್ಲಿ 2 ತಿಂಗಳ ಸಾದಾ ಸಜೆ ಮತ್ತು ಕಲಂ 504 ರ ಅಪರಾಧಕ್ಕಾಗಿ 6 ತಿಂಗಳು ಸಾದಾ ಸಜೆ ಮತ್ತು 500 ರು. ದಂಡ ಮತ್ತು ದಂಡ ಕೊಡಲು ತಪ್ಪಿದಲ್ಲಿ 1 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ನವೆಂಬರ್ 12, 2009 ರಂದು ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಮನಾಯಕನಹಳ್ಳಿ ಗ್ರಾಮದ ಸುಶೀಲಮ್ಮ ಅವರ ಮನೆಯ ಮುಂದಿನ ರಸ್ತೆಯಲ್ಲಿ ಚಂದ್ರಯ್ಯ ಹಸುಗಳು ಹಾಯ್ದಾಡಿದ ವಿಚಾರದಲ್ಲಿ ಜಿದ್ದು ಇಟ್ಟುಕೊಂಡು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಸುಶೀಲಮ್ಮ ಇವರ ಎಡಗೈಗೆ ಹಾಗೂ ಬಲಗೈಗೆ ಹೊಡೆದು ತೀವ್ರ ಸ್ವರೂಪದ ಗಾಯಗೊಳಿಸಿದ್ದ. ಸುಶೀಲಮ್ಮ ಅವರು ಕೊಟ್ಟ ದೂರಿನ ಆಧಾರದ ಮೇಲೆ ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರ ಸಹಾಯಕ ಸರ್ಕಾರಿ ಅಭಿಯೋಜಕ ಡಿ. ದಯಾನಂದ್ ವಾದ ಮಂಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.