ತುಮಕೂರು

ಇಂದು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ

Published On :

ತಿಪಟೂರು: ನಗರದ ಎಸ್.ಕೆ.ವಿ.ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವನ್ನು ಶನಿವಾರ ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ.  ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶಿವಪ್ಪ ವಹಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಡಾ.ಸೋ.ಮು.ಭಾಸ್ಕರಾಚಾರ್ ಭಾಷಣ ಮಾಡಲಿದ್ದಾರೆ. ಬೆಂಗಳೂರು ಸಹಾಯಕ ಆಯುಕ್ತರಾದ ಡಾ.ವೆಂಕಟೇಶಯ್ಯ, ತಹಸೀಲ್ದಾರ್ ವಿಜಯಕುಮಾರ್ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಟಿ.ಎನ್. ಪ್ರಕಾಶ್, ಸಂಸ್ಥೆಯ ಕಾರ್ಯದರ್ಶಿ ಡಿ.ಉಗ್ರಯ್ಯ ಮತ್ತಿತರರು ಭಾಗವಹಿಸಲಿದ್ದಾರೆ.


ನಾಳೆ ನಿವೃತ್ತ ನೌಕರರ ಸಭೆ
ತುಮಕೂರು: ಐ.ಆರ್. ಪಡೆದುಕೊಂಡು ಮಾರ್ಚ್ 31 ರಂದು ವಯೋ ನಿವೃತ್ತಿ ಹೊಂದಿರುವ ನೌಕರರ ಸಭೆಯನ್ನು ಫೆ.17 ರಂದು ತುಮಕೂರಿನ ಪ್ರವಾಸಿ ಮಂದಿರದ ಆವರಣದಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಅನುದಾನಿತ ಶಾಲಾ ಶಿಕ್ಷರಿಗೆ ಮತ್ತು ಕಾಲೇಜು ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗೆ ಸಿಗಬೇಕಾಗಿರುವ ಕನ್ನಡ  ಇನ್‌ಕ್ರಿಮೆಂಟ್ ಬಗ್ಗೆ 58 ವರ್ಷಕ್ಕೂ ವಯೋ ನಿವೃತ್ತಿ ಹೊಂದಿರುವ ಎಲ್ಲಾ ನೌಕರರ ನ್ಯಾಯಯುತ ಬೇಡಿಕೆ ಬಗ್ಗೆ ಚರ್ಚಿಸಲಾಗುವುದು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.