ತುಮಕೂರು

ಬಿಜೆಪಿ ಅಧ್ಯಕ್ಷರು ರಿಸ್ಕ್ ತೆಗೆದುಕೊಳ್ಳುವ ಅಗತ್ಯವಿಲ್ಲ

Published On :

ತುಮಕೂರು: ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರು ತಮ್ಮ ವಿಷಯದಲ್ಲಿ ರಿಸ್ಕ್ ತೆಗೆದುಕೊಳ್ಳವ ಅಗತ್ಯವಿಲ್ಲ ಎಂದು ಜಿಲ್ಲಾ ಕೆಜೆಪಿ ಅಧ್ಯಕ್ಷ ಹಾಗೂ ಬಿಜೆಪಿ ಜಿಪಂ ಸದಸ್ಯ ಹೆಬ್ಬಾಕ ರವಿ ಮಾರ್ಮಿಕವಾಗಿ ನುಡಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾವೊಬ್ಬ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ನಿಜ. 13 ಮಂದಿ ಬಿಜೆಪಿ ಜಿಪಂ ಸದಸ್ಯರಲ್ಲಿ 7 ಮಂದಿ ಹೊರಬರಲಿದ್ದೇವೆ. ಪ್ರತ್ಯೇಕ ಗುಂಪು ರಚಿಸಲಿದ್ದೇವೆ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯಾಗಲೀ, ಅಥವಾ ಜಿಲ್ಲಾ ಬಿಜೆಪಿ ಅಧ್ಯಕ್ಷರು ತಮಗೆ ನೋಟಿಸ್ ನೀಡುವ, ಉತ್ತರ ಕೇಳುವ ಪ್ರಮೇಯವಾಗಲಿ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಫೆ. 16 ರಂದು ಜಿಲ್ಲಾ ಮಟ್ಟದ ಕೆಜೆಪಿ ಪದಾಧಿಕಾರಿಗಳು, ಮುಖಂಡರ ಸಭೆಯನ್ನು ಕರೆಯಲಾಗಿದೆ ಎಂದು ರವಿ ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.