ಹ.ರಾಮಚಂದ್ರಪ್ಪಗೆ ಇಂದು ಅಭಿನಂದನೆ
ಪಾವಗಡ: ಆಂಧ್ರ ಗಡಿನಾಡು ಘಟಕದ ಮಾಜಿ ಅಧ್ಯಕ್ಷ ಹಾಗೂ ಕನ್ನಡ ಅಭಿವೃದ್ಧಿ ಚಿಂತಕ ಹ.ರಾಮಚಂದ್ರಪ್ಪ ಅವರಿಗೆ ಅಭಿನಂದನೆ ಹಾಗೂ ಅಭಿನಂದನಾ ಗ್ರಂಥ ಸಮರ್ಪಣಾ ಸಮಾರಂಭವನ್ನು ಫೆ.16ರಂದು ಶನಿವಾರ ಸಂಜೆ ಪಟ್ಟಣದ ಎಸ್ಎಸ್ಕೆ ಬಯಲು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಸಮಾರಂಭದದಲ್ಲಿ ರಾಮಕೃಷ್ಣ ಸೇವಾಶ್ರಮ ಶ್ರೀ ಜಪಾನಂದ ಸ್ವಾಮೀಜಿಗಳು ಸಾನಿಧ್ಯ ವಹಿಸಲಿದ್ದು ಅಧ್ಯಕ್ಷತೆಯನ್ನು ಶಾಸಕ ವೆಂಕಟರಮಣಪ್ಪ ವಹಿಸುವರು. ಉದ್ಘಾಟನೆಯನ್ನು ಕೇಂದ್ರ ಕನ್ನಡ ಸಾಹಿತ್ಯ ಪರೀಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ನೆರವೇರಿಸುವರು.
ಕೃತಿ ಬಿಡುಗಡೆ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ನೆರೆವೇರಿಸಲಿದ್ದು, ಖ್ಯಾತ ಸಾಹಿತಿಗಳಾದ ಪ್ರೊ. ಚಂದ್ರಶೇಖರ್ ಪಾಟೀಲ ಮತ್ತು ಕುಂ.ವೀರಭದ್ರಪ್ಪ ಅಭಿನಂದನ ನುಡಿಗಳನ್ನು ಆಡಲಿದ್ದಾರೆ. ಕೃ ಕುರಿತು ಸಹಾಯಕ ಪ್ರಾಧ್ಯಾಪಕ ಚಿತ್ತಯ್ಯ ಪೂಜಾರ್ ಮಾತನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ತಿಪೇಸ್ವಾಮಿ, ಎಸ್ಎಸ್ಕೆ ಸಂಘದ ಅಧ್ಯಕ್ಷ ಜಿ.ಎಸ್. ಧರ್ಮಪಾಲ್, ಕೇಂದ್ರ ಕನ್ನಡ ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ರಾಮಚಂದ್ರರಾವ್, ತುಮಕೂರು ಜಿಲ್ಲಾ ಕಸಾಪ ಅಧ್ಯಕ್ಷ ಸೋಮು ಭಾಸ್ಕರಾಚಾರ್, ರೋಟರಿ ಅಧ್ಯಕ್ಷ ಕೆ.ವಿ. ರಾಮನಾಥ್ ತಾ. ಕಸಾಪ ಅಧ್ಯಕ್ಷ ಅಂತರಗಂಗೆ ಶಂಕರಪ್ಪ ಭಾಗವಹಿಸುವರು.
ಈ ಕುರಿತು ಶುಕ್ರವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಸಾಪ ತಾ.ಕೋಶಾಧ್ಯಕ್ಷ ಶಿಕ್ಷಕ ಈರಣ್ಣ ಮಾತನಾಡಿ ಹಾ.ರಾಮಚಂದ್ರಪ್ಪ ಅವರು ಗಡಿ ಗ್ರಾಮದಲ್ಲಿ ಜನಿಸಿದ್ದು ತಾಲೂಕು ಕಸಾಪ ಅಧ್ಯಕ್ಷರಾಗಿ ಆಂಧ್ರ ಗಡಿನಾಡು ಅಧ್ಯಕ್ಷರಾಗಿ ಕಳೆದ 40 ವರ್ಷಗಳಿಂದ ಕನ್ನಡಕ್ಕಾಗಿ ಹೋರಾಡಿ ಕನ್ನಡದ ಕಂಪು ಹರಡಿದ್ದಾರೆ.
ಅಲ್ಲದೆ ಕನ್ನಡಪರ ಚಟವಟಿಕೆಗಳಲ್ಲಿ ತೊಡಗಿಸಿಕೊಂಡು ಭಾಷೆ ಅಭಿವೃದ್ಧಿಗೆ ಈಗಲೂ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಅವರಿಗೆ ಹಿರಿಯ ಸಾಹಿತಿಗಳ ಸಮ್ಮುಖದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಿರುವುದಾಗಿ ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

