ಪತಿಗೆ ಕ್ಯಾನ್ಸರ್; ಮಕ್ಕಳಿಗೆ ವಿಷವುಣಿಸಿ ಪತ್ನಿ ಆತ್ಮಹತ್ಯೆ
ಶಿರಾ: ಪತಿಗೆ ಕ್ಯಾನ್ಸರ್ ಎಂದು ತಿಳಿದ ಕೂಡಲೇ ಮನನೊಂದ ಪತ್ನಿ ತನ್ನಿಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಬಾಲಾಜಿನಗರದಲ್ಲಿ ಶನಿವಾರ ಸಂಭವಿಸಿದೆ.
ಬಾಲಾಜಿ ನಗರ ನಿವಾಸಿ ಭದ್ರಿನಾಥ್ ಅವರ ಪತ್ನಿ ಸ್ಮಿತಾ (31) ತನ್ನ ಮಕ್ಕಳಾದ ಸಾನಿಕಾ (5) ಹಾಗೂ ಸಂಚಿತ್ (1)ಗೆ ವಿಷ ಉಣಿಸಿ ತಾನೂ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಭದ್ರಿನಾಥ್ಗೆ ಕ್ಯಾನ್ಸರ್ ಇರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದಿತ್ತು. ದೃಢಪಡಿಸಿಕೊಳ್ಳಲು ಹೈದರಾಬಾದ್ಗೆ ತೆರಳಿದ್ದ ಭದ್ರಿನಾಥ್ ಶುಕ್ರವಾರ ರಾತ್ರೆ ಕರೆ ಮಾಡಿ, ಕ್ಯಾನ್ಸರ್ ಇರುವುದನ್ನು ವೈದ್ಯರು ದೃಢೀಕರಿಸಿದ್ದು, ಇನ್ನು ಕೆಲವೇ ತಿಂಗಳುಗಳು ಬದುಕಿರುವುದಾಗಿ ಖಚಿತಪಡಿಸಿದ್ದಾರೆ ಎಂದು ಹೇಳಿದ್ದರು. ಇದರಿಂದ ನೊಂದ ಸ್ಮಿತಾ ಈ ಕಠಿಣ ನಿರ್ಧಾರಕ್ಕೆ ಬಂದಿದ್ದಳು ಎನ್ನಲಾಗಿದೆ. ಭದ್ರಿನಾಥ್ ಅವರ ಮನೆ ಕೆಳಗೆ ಅವರ ಸಹೋದರ ವಾಸವಿದ್ದಾರೆ. ಬೆಳಗ್ಗೆ ಸ್ಮಿತಾ ಎಷ್ಟು ಹೊತ್ತಾದರೂ ಬಾಗಿಲು ತೆರೆಯದ ಕಾರಣ ಈ ಪ್ರಕರಣ ಬೆಳಕಿಗೆ ಬಂದಿದೆ. ಸಿಪಿಐ ಪ್ರಹ್ಲಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

