ತುಮಕೂರು

ಬಸ್ ಏಜೆಂಟರ ಸಂಘದಿಂದ ಜನ್ಮದಿನ ಆಚರಣೆ

Published On :

ಹುಳಿಯಾರು: ಹೋಬಳಿ ಖಾಸಗಿ ಬಸ್ ಏಜೆಂಟರ ಸೇವಾ ಚಾರಿಟಬಲ್  ಟ್ರಸ್ಟ್ ವತಿಯಿಂದ ಶಾಸಕ ಸಿ.ಬಿ.ಸುರೇಶ್‌ಬಾಬು ಅವರ 43ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ, ಕೇಕ್ ಕತ್ತರಿಸಿ, ಸಿಹಿ ಹಾಗೂ ಲಘು ಉಪಹಾರ ವಿತರಿಸಿದರು. ಅಪಘಾತದಲ್ಲಿ ಮರಣ ಹೊಂದಿದವರ ಕುಟುಂಬದವರಿಗೆ ಹಾಗೂ ಗಾಯಗೊಂಡ ಫಲಾನುಭವಿಗಳಿಗೆ ಪರಿಹಾರ ಹಣವಿತರಿಸುವ ಮೂಲಕ ಜನ್ಮದಿನಾಚರಣೆ ಆಚರಿಸಿ, ನಂತರ ಗೋಡೆಕೆರೆಗೆ ತೆರಳಿ ನೆಚ್ಚಿನ ನಾಯಕರಿಗೆ ಶುಭಾಷಯ ತಿಳಿಸಿದರು. ಸಂಘದ ಅಧ್ಯಕ್ಷ ಲೋಕೇಶ್, ಉಪಾಧ್ಯಕ್ಷ ಕುಮಾರ್, ವಿಶ್ವಣ್ಣ, ಇಂತಿ ಯಾಜ್, ಅಮಾನುಲ್ಲಾ, ರಾಜಣ್ಣ, ಚಂದ್ರಶೇಖರ್, ನಾಗಭೂಷಣ್, ವೆಂಕಟೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.