ತುಮಕೂರು

ಸರಣಿ ಅಪಘಾತ; ಬೆಂಗಳೂರಿನ ಇಬ್ಬರ ಸಾವು

Published On :

ಕುಣಿಗಲ್:  ರಾಹೆ 48ರ ಚತುಷ್ಪಥ ರಸ್ತೆಯ ಕುಣಿಗಲ್ ಬೈಪಾಸ್‌ನ ಚನ್ನತಿಮ್ಮನಪಾಳ್ಯ ಗ್ರಾಮದ ಬಳಿ ಕೆಟ್ಟು ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅದರ ಹಿಂದೆಯೇ ವೇಗವಾಗಿ ಬಂದ 6ಕ್ಕೂ  ಹೆಚ್ಚು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೆ ಮೃತಪಟ್ಟು ಇಪ್ಪತೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ  ಚನ್ನತಿಮ್ಮನಪಾಳ್ಯ ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಹೊಡೆದು ಚಾಲಕರು ಪರಸ್ಪರ ಮಾತಿನ ಚಕಮಕಿಯಲ್ಲಿದ್ದಾಗ, ಇದರ ಹಿಂದೆ ಬಂದ ಫೋರ್ಡ್, ಇಂಡಿಕಾ, ವ್ಯಾಗನ್ ಆರ್, ಟಾಟಾ ಸುಮೋ ವಾಹನಗಳ ಚಾಲಕರು ಜಗಳ ಬಗೆಹರಿಸಲು ನಿಂತರು. ಈ ಸಮಯದಲ್ಲಿ ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆಯಿತು. ನಂತರ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು  ಕಾರು, ಟೆಂಪೋ ಟ್ರಾವಲ್ ಕೂಡ ಅದೆ ಲಾರಿಗೆ ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಪಕ್ಕದಲ್ಲಿದ್ದ ವಾಹನಗಳು ಒಂದಕ್ಕೊಂದು ಗುದ್ದಿ ಸರಣಿ ಅಪಘಾತ ಸಂಭವಿಸಿತು.
ಅಪಘಾತದ ರಭಸಕ್ಕೆ ರಾಹೆ 48ರಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿದ್ದು, ಡಿವೈಎಸ್ಪಿ ಉಮಾರಾಣಿ, ಸಿಪಿಐ ಧಮೇಂದ್ರ, ಪಿಎಸೈ ಗುರುಪ್ರಸಾದ್ ಸ್ಥಳಕ್ಕೆ ತೆರಳಿ ವಾಹನ ಸಂಚಾರ ನಿಯಂತ್ರಣ ಹಾಗೂ ಪರಿಸ್ಥಿತಿ ನಿಯಂತ್ರಿಸಲು ಹೆಣಗಾಡಿದರು. ಅಪಘಾತದಲ್ಲಿ ಮೃತಪಟ್ಟವರನ್ನು  ಬೆಂಗಳೂರಿನ ಇಬ್ಬರು ಮಹಿಳೆಯರೆಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆ ಸೇರಿದಂತೆ ಬೆಳ್ಳೂರು ಕ್ರಾಸ್‌ನ ಆದಿ ಚುಂಚನಗಿರಿ ಆಸ್ಪತ್ರೆಗೆ ಕಳುಹಿಸಲಾಯಿತು. ಕ್ರೇನ್ ಸಹಾಯದಿಂದ ಅಪಘಾತದಲ್ಲಿ ನುಜ್ಜುಗುಜ್ಜಾದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ತಡರಾತ್ರಿ ಅನುವು ಮಾಡಿಕೊಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.