ತುಮಕೂರು

'ನಾನು ಜೆಡಿಎಸ್ ಟಿಕೆಟ್ ಆಕಾಂಕ್ಷಿ'

Published On :

ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಗೆ ತುಮಕೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿ ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ಹಾಗೂ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಕ್ಯಾಪ್ಟನ್ ಶೇಖ್ ಅಲಿ ತಿಳಿಸಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಭಾರತೀಯ ಸೇನೆಯಲ್ಲಿ 20 ವರ್ಷಗಳ ಕಾಲ ದುಡಿದಿದ್ದೇನೆ. ಈಗ ನಾನು ನಿವೃತ್ತಿಯ ನಂತರ ಜನಪರ ಸೇವೆ ಮಾಡಲು ತುಮಕೂರಿನ ಸ್ಥಳೀಯನಾಗಿರುವುದರಿಂದ ಜಾತ್ಯತೀತ ಪಕ್ಷವಾದ ಜನತಾದಳದಿಂದ ವಿಧಾನಸಭೆಗೆ ಸ್ಪರ್ಧಿಸಲು ಆಕಾಂಕ್ಷಿಯಾಗಿರುವುದಾಗಿ ಹೇಳಿದರು.
ಪಕ್ಷದ ವರಿಷ್ಠರು ತುಮಕೂರು ನಗರದಿಂದ ಸ್ಪರ್ಧಿಸಲು ಆಶ್ವಾಸನೆ ನೀಡಿ, ಬೆನ್ನು ತಟ್ಟಿದ್ದರು. ಅದರಂತೆ ನಾನು ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇನೆ. ಪಕ್ಷದಿಂದ ಟಿಕೆಟ್ ನೀಡಿದರೆ ಎಲ್ಲರ ಸಹಕಾರದೊಂದಿಗೆ ಪಕ್ಷವನ್ನು ಗೆಲ್ಲಿಸುವುದರೊಂದಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಶ್ರಮಿಸುವುದಾಗಿ ಹೇಳಿದರು.  ಕಾಂಗ್ರೆಸ್ ಪಕ್ಷವು ಮುಸಲ್ಮಾನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ವರದಿ ತಯಾರಿಸಲು ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಾಧೀಶ ರಾಜೀಂದರ್ ಸಾಚಾರ್ ನೇತೃತ್ವದ 6 ಮಂದಿ ಸಮಿತಿಯನ್ನು ರಚಿಸಿತ್ತು. ಸಮಿತಿಯು ಮುಸಲ್ಮಾನರ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ, 403 ಪುಟಗಳ ವರದಿಯನ್ನು ಪ್ರಧಾನಿ ಮನಮೋಹನಸಿಂಗ್ ಅವರಿಗೆ ನೀಡಿತ್ತು. ದೇಶದ ಜನಸಂಖ್ಯೆಯಲ್ಲಿ ಶೇ.14ರಷ್ಟು ಹಾಗೂ 2.5ರಷ್ಟು ಅಧಿಕಾರಿ ವರ್ಗವಿರುವ ಮುಸಲ್ಮಾನರ ಬದುಕು ದೇಶದ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಬದುಕಿಗಿಂತ ದುಸ್ತರವಾಗಿದೆ ಎಂದರು.
ಆದರೆ ಕಾಂಗ್ರೆಸ್ ಸಾಚಾರ್ ವರದಿಯನ್ನು ಅನುಷ್ಠಾಗೊಳಿಸದೇ ಕೇವಲ ಅವರನ್ನು ಬಳಸಿಕೊಳ್ಳುವ ಕೆಲಸವನ್ನು ಮಾಡುತ್ತಿದೆ. ದೇಶದ ಮುಸಲ್ಮಾನರು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡ ನೇತೃತ್ವದ ಜಾತ್ಯತೀತ ಜನತಾದಳ ಪಕ್ಷದ ಕಡೆ ಅಲ್ಪಸಂಖ್ಯಾತರು ಹೆಚ್ಚು ಒಲವು ತೋರುತ್ತಿದ್ದಾರೆ.  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಅಲ್ಪಸಂಖ್ಯಾತ ಜನಸಂಖ್ಯೆಯುಳ್ಳ ತುಮಕೂರು ವಿಧಾನಸಭಾ ಕ್ಷೇತ್ರಕ್ಕೆ ನನಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿದರೆ ಕಳೆದ ನಾಲ್ಕು ವಿಧಾನಸಭಾ ಚುನಾವಣೆಗಳ ನಂತರ ಪ್ರಥಮವಾಗಿ ಜೆಡಿಎಸ್ ಜಯಭೇರಿ ಭಾರಿಸಲಿದೆ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.