ತುಮಕೂರು

ಸ್ವಪ್ರೇರಣೆಯಿಂದ ರಕ್ತದಾನ ಮಾಡಿ: ಡಾ.ಜಯದೇವಪ್ಪ

Published On :

ತಿಪಟೂರು: ಸಾರ್ವನಿಕ ಕ್ಷೇತ್ರವು ಅಸಾಮಾನ್ಯ ಪ್ರತಿಭೆಗಳಿಂದ ಕೂಡಿದ ಕ್ಷೇತ್ರವಾಗಿದ್ದು, ಅದನ್ನು ನಿರ್ಲಕ್ಷಿಸದೆ ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕಾದುದು ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರಾಂಶುಪಾಲ ಡಾ.ಜಯದೇವಪ್ಪ ತಿಳಿಸಿದರು.
 ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಯುವರೆಡ್ ಕ್ರಾಸ್ ಘಟಕ, ಎನ್.ಎಸ್.ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಯುವರೆಡ್ ಕ್ರಾಸ್ ಘಟಕ ಉದ್ಘಾಟನೆ ಮತ್ತು ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ರಕ್ತದಾನ ಮಾಡುವುದರಿಂದ ಮಾನವೀಯ ಸಂಬಂಧಗಳು ವೃದ್ಧಿಯಾಗುವುದರ ಜೊತೆಗೆ ಆರೋಗ್ಯಕ ಜೀವನ ನಡೆಸಬಹುದು. ಮೌಢ್ಯತೆಯಿಂದ ಹೊರಬಂದು ಪ್ರತಿಯೊಬ್ಬರೂ ಸ್ವಪ್ರೇರಣೆಯಿಂದ ರಕ್ತದಾನ ಮಾಡಿದರೆ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬಹುದು. ಇಂತಹ ಶಿಬಿರಗಳಲ್ಲಿ ಕುಟುಂಬ ಪರಿವಾರ ಭಾಗವಹಿಸುವುದರ ಮೂಲಕ ಮಾಹಿತಿ ಪಡೆದು ಬೇರೆಯವರಿಗೆ ಅರಿವನ್ನು ಮೂಡಿಸಬೇಕೆಂದು ಕರೆ ನೀಡಿದರು.
ಆರೋಗ್ಯ ಮುಖ್ಯ: ಸಾರ್ವಜನಿಕ ಆಸ್ಪತ್ರೆಯ ಡಾ.ಚನ್ನಬಸವಯ್ಯ ಉಪನ್ಯಾಸ ನೀಡಿ, ಆರೋಗ್ಯಕ್ಕಿಂತ ಸಂಪತ್ತು ಮುಖ್ಯವಲ್ಲ. ಆರೋಗ್ಯದಿಂದಿದ್ದರೆ ಏನನ್ನಾದರೂ ಸಂಪಾದಿಸಬಹುದು. ಭಾವನಾತ್ಮಕ ನೆಲಗಟ್ಟನ್ನು ಅರ್ಥಮಾಡಿಕೊಂಡರೆ ಮಾತ್ರ ಜೀವನ ಪರಿಪೂರ್ಣವಾಗಲು ಸಾಧ್ಯ. ಅಂಕಪಟ್ಟಿ ಪಡೆದರೆ ಮಾತ್ರ ಪದವೀಧರನಾಗಲು ಸಾಧ್ಯವಿಲ್ಲ. ಸಮಾಜದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕೆಂದರು. ಇಂತಹ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಯುವ ಜನತೆಗೆ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾದಿ ಡಾ.ಪ್ರಹ್ಲಾದ್, ಹದಿನೆಂಟು ವರ್ಷದ ಮೇಲ್ಪಟ್ಟ ಯಾರು ಬೇಕಾದರೂ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದ್ದು, ಇದರಿಂದ ಆರೋಗ್ಯವಂತರಾಗಿ ಕಾಯಿಲೆ ಮುಕ್ತ ಜೀವನ ನಡೆಸಬಹುದಲ್ಲದೆ ಬೇರೆಯವರ ಜೀವವನ್ನು ಉಳಿಸಿದಂತಾಗುತ್ತದೆ ಎಂದರು.
ಮಾನವೀಯ ಗುಣ ಬೆಳೆಸಿಕೊಳ್ಳಿ: ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರಾದ ಡಾ.ರವಿ ಮಾತನಾಡಿ ರಕ್ತದಾನ ಶಿಬಿರ ಅಥವಾ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದಾನ ಮಾಡಿ ಬಡವರ, ನಿರ್ಗತಿಕರ ಜೀವವನ್ನು ಉಳಿಸುವಂತಹ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದರು. ಯುವರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಪ್ರೊ.ಈರಯ್ಯ ಪ್ರತಿಜ್ಞಾವಿಧಿ ಬೋಧಿಸಿ, ಯಾವುದೇ ರೀತಿಯ ಪೂರ್ವಾಗ್ರಹ ಪೀಡಿತರಾಗದೆ ನಿರ್ಭಯವಾಗಿ ರಕ್ತದಾನ ಮಾಡಬೇಕೆಂದರು. ಕಾರ್ಯಕ್ರಮದಲ್ಲಿ ಪ್ರಸೂತಿ ತಜ್ಞೆ ಡಾ.ಗಂಗಾಮಣಿ, ಇತಿಹಾಸ ವಿಭಾಗದ ಮುಖ್ಯಸ್ಥ ರಾಮಚಂದ್ರ, ಜ್ಯೋತಿಕಿರಣ್, ಡಾ.ವೆಂಕಟೇಶ್, ವಿಜಯಲಕ್ಷ್ಮಿ, ಚಿನ್ನಸ್ವಾಮಿ, ರಂಗಲಕ್ಷ್ಮಿ, ನರಸಿಂಹಮೂರ್ತಿ ಮತ್ತಿತರರಿದ್ದರು.
ಡಾ.ನಾಗೇಂದ್ರ ಸ್ವಾಗತಿಸಿ, ಡಾ.ಹೊನ್ನಾಂಜಿನಯ್ಯ ನಿರೂಪಿಸಿ, ಪ್ರೊ.ಯಶೋಧ ವಂದಿಸಿದರು. ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.