ನಾಳೆ, ನಾಡಿದ್ದು ಎಸ್ಡಿಎ ಪರೀಕ್ಷೆ
ತುಮಕೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ 1750 ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡುವ ನಿಮಿತ್ತ ತುಮಕೂರು ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ ಫೆಬ್ರವರಿ 23 ಮತ್ತು 24 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಕೆ. ರಾಜು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫೆ.23 ರಂದು ಎಂಪ್ರೆಸ್ ಕೇಂದ್ರದಲ್ಲಿ 504 ಅಭ್ಯರ್ಥಿಗಳು ಮಧ್ಯಾಹ್ನ 2-30 ರಿಂದ ಸಂಜೆ 5-30 ರವರೆಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆಯುವರು. ಮತ್ತು ಫೆಬ್ರವರಿ 24 ರಂದು 44 ಕೇಂದ್ರಗಳಲ್ಲಿ ಬೆ. 9 ರಿಂದ ಸಂಜೆ 4-30ರವರೆಗೆ ಒಟ್ಟು 16,896 ಅಭ್ಯರ್ಥಿಗಳು ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಪರೀಕ್ಷೆ ಬರೆಯುವರು ಎಂದು ಸಭೆಗೆ ಮಾಹಿತಿ ನೀಡಿದರು.
ಬೆ.9-30 ರಿಂದ 10 ಗಂಟೆಯವರೆಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ, 11-30 ರಿಂದ ಮ.1 ಗಂಟೆಯವರೆಗೆ ಸಾಮಾನ್ಯ ಪರೀಕ್ಷೆ ಮತ್ತು ಮ.2-30ರಿಂದ 4-30ರವರೆಗೆ ನಿರ್ದಿಷ್ಟ ಪತ್ರಿಕೆಯ ಪರೀಕ್ಷೆಗಳನ್ನು ಅಭ್ಯರ್ಥಿಗಳು ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಡಿ.ಡಿ.ಪಿ.ಐ. ಮೋಹನ್ಕುಮಾರ್, ಎಲ್ಲಾ ತಾಲೂಕುಗಳ ಬಿಇಒಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

