ಕೊಳಕರಿಗೆ ಬಿಜೆಪಿ ಟಿಕೆಟ್ ಇಲ್ಲ: ಸೊಗಡು
ತುಮಕೂರು: ನಗರಸಭಾ ಚುನಾವಣೆಯಲ್ಲಿ ಈ ಬಾರಿ ಕೊಳಕರಿಗೆ ಬಿಜೆಪಿಯಿಂದ ಟಿಕೆಟ್ ನೀಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ ಖಡಕ್ ಆಗಿ ನುಡಿದಿದ್ದಾರೆ.
ಕಳೆದ ಬಾರಿ ಆಯ್ಕೆಯಾದ 9 ನಗರಸಭಾ ಸದಸ್ಯರಲ್ಲಿ ಸುಜಾತ ಚಂದ್ರಶೇಖರ್ ಮತ್ತು ಲಕ್ಷ್ಮೀ ನರಸಿಂಹರಾಜು ಅವರಿಗೆ ಈ ಬಾರಿಯೂ ಟಿಕೆಟ್ ನೀಡಲಾಗುವುದು. ಅದು ಬಿಟ್ಟರೆ ಇನ್ನು ಒಬ್ಬರೋ, ಇಬ್ಬರೋ ಹಳಬರಿಗೆ ಮಾತ್ರ ಟಿಕೆಟ್ ನೀಡಲಾಗುವುದು. ಉಳಿದವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಇಲ್ಲ ಎಂದಿದ್ದಾರೆ.
ಒಳ್ಳೋರಿಗೆ ಮಾತ್ರ ಟಿಕೆಟ್: ಗುಜರಾತ್ ಮುಖ್ಯಮಂತ್ರಿ ಹೇಳಿದ ಹಾಗೆ ಒಳ್ಳೆಯ ತನವಾಗಿ ನಡೆದುಕೊಂಡವರಿಗೆ ಮಾತ್ರ ಪಕ್ಷದ ಟಿಕೆಟ್ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು. ತಮ್ಮ ಬಾಮೈದ ಬಾವಿಕಟ್ಟೆ ನಾಗೇಶ್ ಸೇರಿದಂತೆ ಯಾವೊಬ್ಬರಿಗೂ ಬಿ ಫಾರಂ ನೀಡಿಲ್ಲ ಎಂದು ಸ್ಪಷ್ಟಪಡಿಸಿದ ಸೊಗಡು ಶಿವಣ್ಣ, ಶುಕ್ರವಾರ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಇದೆ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪಟ್ಟಿ ಸಿದ್ದ: ಬಹುತೇಕ ಎಲ್ಲಾ ವಾರ್ಡ್ಗಳ ಪಟ್ಟಿ ಸಿದ್ಧವಾಗಿದೆ. ಕೆಲವು ವಾರ್ಡ್ಗಳಲ್ಲಿ ಗೊಂದಲ ಇದ್ದು ಅದನ್ನು ಬಗೆಹರಿಸುವುದಾಗಿ ತಿಳಿಸಿದರು. ಕೆಲವೊಂದು ವಾರ್ಡ್ಗಳಲ್ಲಿ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಅಂತವರನ್ನು ಮನವೊಲಿಸಲಾಗುವುದು ಎಂದಿದ್ದಾರೆ.
ಟಿಕೆಟ್ ಸಿಗದವರು ಹೋಗಿದ್ದಾರೆ: ನಿಮ್ಮ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ವಲಸೆ ಹೋಗುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಒಂದು ವಾರ್ಡ್ಗೆ ಒಬ್ಬರಿಗೆ ಮಾತ್ರ ಪಕ್ಷದ ಟಿಕೆಟ್ ನೀಡಲಾಗುತ್ತದೆ. ಟಿಕೆಟ್ ಸಿಗದ ಕೆಲವರು ಕಾಂಗ್ರೆಸ್, ಕೆಜೆಪಿ ಅಂತಾ ಹೋಗುತ್ತಿದ್ದಾರೆ ಅಷ್ಟೆ ಎಂದು ಪ್ರತಿಕ್ರಿಯಿಸಿದರು.
ಶಾಂತಿ ಸುವ್ಯವಸ್ಥೆ: ಈಗಾಗಲೇ ನಗರಸಭಾ ವ್ಯಾಪ್ತಿಯಲ್ಲಿ ಸರ್ಕಾರದ ವತಿಯಿಂದ ಹಲವಾರು ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ. ಸುಗಮ ಸಂಚಾರ, ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿರುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬರಗಾಲ ಇದ್ದರೂ ನೀರು ಕೊಟ್ಟಿದ್ದೇವೆ ಎಂದ ಅವರು ಫ್ಲೋರೈಡ್ ಸಮಸ್ಯೆ ಇರುವುದನ್ನು ಒಪ್ಪಿಕೊಂಡರು.
1300 ಮನೆ ನಿರ್ಮಾಣ: ತುಮಕೂರು ನಗರದ ಸ್ಲಂ ಜನರಿಗಾಗಿ ದಿಬ್ಬೂರಿನಲ್ಲಿ 6 ಎಕರೆ ಜಾಗದಲ್ಲಿ ಅಪಾರ್ಟ್ಮೆಂಟ್ ಮಾದರಿಯಲ್ಲಿ 1300 ಮನೆ ಕಟ್ಟಿಕೊಡಲಾಗುವುದು ಎಂದು ತಿಳಿಸಿದರು. ಈಗಾಗಲೇ ಸರ್ಕಾರದಿಂದ ಅನುಮೋದನೆ ಸಹ ಸಿಕ್ಕಿದೆ ಎಂದು ಹೇಳಿದರು. ಒಟ್ಟಾರೆಯಾಗಿ ತುಮಕೂರು ನಗರದ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು ತಮ್ಮ ಮೊದಲ ಆದ್ಯತೆ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇನೆ ಎಂದರು.
ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ಗೌಡ, ಟೂಡಾ ಅಧ್ಯಕ್ಷ ಶ್ರೀಧರಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

