ತುಮಕೂರು

ನಾಳೆಯಿಂದ ಸಂಸ್ಕ ೃತಿ ಉತ್ಸವ

Published On :

ತುಮಕೂರು: ಇಲ್ಲಿನ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಫೆ.26 ರಿಂದ ಮಾರ್ಚ್ 1 ರವರೆಗೆ ಪ್ರತಿ ದಿನ ಸಂಜೆ 5 ರಿಂದ ರಾತ್ರಿ 9 ರವರೆಗೆ ನಾಟಕಮನೆ ವತಿಯಿಂದ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ. 26 ರಂದು ಸಂಜೆ 5 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಲಕ್ಷ್ಮಣದಾಸ್ ನೆರವೇರಿಸುವರು. ಅಧ್ಯಕ್ಷತೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಆಪಿನಕಟ್ಟೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಾಡಶೆಟ್ಟಿಹಳ್ಳಿ ಸತೀಶ್ ಆಗಮಿಸುವರು. ಇದೇ ಸಂದರ್ಭ  ಗೋವಿಂದಾಯನಮಃ, ಕವಿ ವರ್ಸಸ್ ಕಲಿ, ಭೀಷ್ಮ, ನಾಟಕ ಪ್ರದರ್ಶನಗೊಳ್ಳಲಿದೆ. ಮಾ.1ರಂದು ನಡೆಯಲಿರುವ ಅಭಿನಂದನೆ ಹಾಗೂ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಿ.ಟಿ. ಮುನಿರಾಜಯ್ಯ ವಹಿಸಲಿದ್ದಾರೆ.
ಧನಿಯಾಗೆ
ಸನ್ಮಾನ
ತುಮಕೂರು: ಕೆಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ನೇಮಕಗೊಂಡಿರುವ ಧನಿಯಾಕುಮಾರ್‌ರನ್ನು ಕನ್ನಡ ಸೇನೆ ವತಿಯಿಂದ ಗೌರವಿಸಲಾಯಿತು. ಕನ್ನಡ ಸೇನೆ ಅಧ್ಯಕ್ಷೆ ಆಶಾ ಕಾಶಿನಾಥ್, ಆರ್.ಎನ್.ವೆಂಕಟಾಚಲ, ವಿಠ್ಠಲ್, ಲಿಯಾಖತ್ ಆಲಿ, ಜ್ಯೋತಿ, ನಾಗರತ್ನ, ರಾಧ, ಕೇಶವಮೂರ್ತಿ, ನಾಗರಾಜು, ನಾಣಿ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.