'ಯಡಿಯೂರಪ್ಪ ಕನಸು ನನಸು ಮಾಡಬೇಕಿದೆ'
ಕೊರಟಗೆರೆ: ತಳಮಟ್ಟದಿಂದ ಕಾರ್ಯಕರ್ತರು ಕೆಜೆಪಿ ಪಕ್ಷವನ್ನು ಸಂಘಟಿಸಿ ಬಲಪಡಿಸಿ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರ ಕನಸು ನನಸು ಮಾಡಬೇಕಾಗಿದೆ ಎಂದು ನಗರಸಭಾ ಮಾಜಿ ಉಪಾಧ್ಯಕ್ಷ ವಾಲೇ ಚಂದ್ರಯ್ಯ ತಿಳಿಸಿದರು.
ಅವರು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಕೋರಾ ಹೋಬಳಿಯ ಅಟವಿ ಮಠದಲ್ಲಿ ಕೆಜೆಪಿ ಪಕ್ಷದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿ ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನವಣೆಯಲ್ಲಿ ಕೆಜೆಪಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚು ಗೆಲ್ಲಿಸಿದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರ ಅವಧಿಯಲ್ಲಿ ಅನುಷ್ಠಾನಗೊಳಿಸಿದ್ದ ಈಗ ಕುಂಠಿತಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿ ಪೂರ್ಣಗೊಳಿಸಲು ಅನುಕೂಲವಾಗುತ್ತದೆ ಎಂದರು.
ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಕೆಜೆಪಿ ಅಧ್ಯಕ್ಷ ಪ್ರಭಾಕರ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಪಟ್ಟಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಕೋಟ್ಯಂತರ ರು. ಅನುದಾನ ನೀಡುವುದರೊಂದಿಗೆ ಸಾಕಷ್ಟು ಸಾಧನೆ ಮಾಡಿದ್ದು ಇಂತಹ ಮಹತ್ವದ ಕಾರ್ಯ ಜನರ ಮನಸ್ಸಿನಲ್ಲಿದ್ದು ಇಂತಹ ಅಭಿವೃದ್ಧಿ ಯೋಜನೆಗಳು ಕೆಜೆಪಿ ಪಕ್ಷಕ್ಕೆ ಮತವಾಗಿ ಪರಿವರ್ತನೆಯಾಗಲಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ಕಳಕಳಿ ಉಳ್ಳ ವ್ಯಕ್ತಿಗೆ ಪಕ್ಷದ ಟಿಕೆಟ್ ನೀಡಲಾಗಿದ್ದು ಅವರ ಗೆಲವಿಗೆ ಶ್ರಮಿಸುವುದರೊಂದಿಗೆ ಪಕ್ಷಕ್ಕೆ ನೀಡಿರುವ ತಾತ್ಕಾಲಿಕ ಚಿನ್ನೆಯಾದ ತೆಂಗಿನಕಾಯಿ ಗುರುತನ್ನು ಕಾರ್ಯಕರ್ತರು ಮತದಾರರಲ್ಲಿ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಲಿಂಗಣ್ಣ, ರಾಜೇಂದ್ರ ಕುಮಾರ್, ಹನುಮಂತರಾಯಪ್ಪ, ಸಿದ್ದಯ್ಯ, ಶಿವಕುಮಾರ್, ಸುರೇಶ್, ಅಂಬರೀಷ್, ಕೆ.ಪಿ. ಪ್ರಕಾಶ್, ರಾಜಣ್ಣ, ಕೃಷ್ಣಮೂರ್ತಿ, ನರಸಿಂಹರಾಜು, ಜಾವೀದ್, ಕಲೀಲ್ ಅಹಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

