ತುಮಕೂರು

ಶುದ್ಧ ಚಾರಿತ್ರ್ಯವೇ ಜನಾಂಗದ ಜೀವಾಳ: ಎಂ. ಕೊಟ್ರೇಶ್

Published On :

ತುಮಕೂರು: ಶುದ್ಧ ಚಾರಿತ್ರ್ಯವೇ ಜನಾಂಗದ ಜೀವಾಳವಾಗಿದ್ದು ಶುದ್ಧ ಚಾರಿತ್ರ್ಯವನ್ನು  ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕೆಂದು ತುಮಕೂರು ವಿವಿ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಎಂ. ಕೊಟ್ರೇಶ್ ಅಭಿಪ್ರಾಯಪಟ್ಟರು.
ಅವರು ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.ಸ್ವಾಮಿ ವಿವೇಕಾನಂದರ ಕನಸದಾ ರಾಷ್ಟ್ರೀಯ ಪುನರ್ ನಿರ್ಮಾಣವನ್ನು ಮಾಡಬೇಕು. ವಿಚಾರವಂತರಾದರೆ ಸಾಲದು. ಮಿಗಿಲಾಗಿ  ಬುದ್ಧಿವಂತಿಕೆಯನ್ನು ಸಹ ಅಳವಡಿಸಿಕೊಳ್ಳಬೇಕು ಎಂದರು. ಪ್ರಸ್ತುತ ಐಷಾರಾಮಿ ಜೀವನದ ನಿರೀಕ್ಷೆಯನ್ನು ಇಟ್ಟುಕೊಳ್ಳದೆ ಸರಳವಾಗಿ ಸಾಗಿದ್ದಲ್ಲಿ ಯಶಸ್ವಿಯಾಗುತ್ತೀರ ಎಂದು ಕಿವಿಮಾತು ಹೇಳಿದರು.
ಪ್ರಸ್ತುತ ದಿನಗಳಲ್ಲಿ ಎನ್‌ಎಸ್‌ಎಸ್ ಎಂಬುದು ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅವಶ್ಯಕತೆ ಇದ್ದು ಶ್ರದ್ಧೆಯಿಂದ ಕಲಿತು ಕಷ್ಟದ ಪರಿಸ್ಥಿತಿಗಳನ್ನು ಮೆಟ್ಟಿನಿಲ್ಲುವಂತಹ ಸಾಹಸಮಯಿಗಳಾಗಬೇಕು ಎಂದು ಕರೆ ನೀಡಿದರು.
ತುಮಕೂರು ವಿವಿ ನಿಕಟಪೂರ್ವ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಪ್ರೊ. ಬಿ. ಮಂಜೇಗೌಡ ಮಾತನಾಡಿ ಎನ್‌ಎಸ್‌ಎಸ್ ಎಂಬುದು ಗಾಂಧೀಜಿಯವರ ಕನಸಿನ ಕೂಸಾಗಿದ್ದು ಆ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಎಲ್ಲಾ ಸ್ವಯಂ ಸೇವಕರು ಮುಂದಾಗಬೇಕೆಂದು ತಿಳಿಸಿದರು. ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಸಂಯೋಜನಾಧಿಕಾರಿ ಡಾ.ವೈ.ಎಂ. ರೆಡ್ಡಿ ಅವರು ಮಾತನಾಡಿ ಭಾರತೀಯ ಸಂಸ್ಕೃತಿಯನ್ನು ಅರಿತುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಗಿದ್ದಲ್ಲಿ ಮಾನವ ಜೀವನ ಸಾರ್ಥಕವಾಗುತ್ತದೆ ಎಂದರು. ಎನ್‌ಎಸ್‌ಎಸ್ ಅಧಿಕಾರಿ ಪ್ರೊ. ಹೇಮಂತಕುಮಾರ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ. ವಿಜಯೇಂದ್ರ ಅಧ್ಯಕ್ಷತೆ ವಹಿಸಿದ್ದರು. ತೇಜಸ್ವಿನಿ ಮತ್ತು ಶ್ವೇತಾ ಪ್ರಾರ್ಥಿಸಿದರು. ಸಂತೋಷ್, ಉಷಾಕುಮಾರಿ ನಿರೂಪಿಸಿ ಮಂಜುಳಾ ಸ್ವಾಗತಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಪ್ರೊ. ಎಲ್. ಶ್ರೀನಿವಾಸಮೂರ್ತಿ ವರದಿ ನೀಡಿದರು. ಲಕ್ಷ್ಮೀ ವಂದಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.