ತುಮಕೂರು

ಎಸ್‌ಪಿಎಂ ನೇತೃತ್ವದಲ್ಲೇ ಚುನಾವಣೆ

Published On :

ಕುಣಿಗಲ್: ಮುಂದಿನ ವಿಧಾನಸಭಾ ಚುನಾವಣೆಯನ್ನು ಜೆಡಿಎಸ್  ಮಾಜಿ ಶಾಸಕ ಎಸ್.ಪಿ.ಮುದ್ದಹನುಮೇಗೌಡರ ನೇತೃತ್ವದಲ್ಲಿ  ಎದುರಿಸಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳುವ ಮೂಲಕ, ಕುಣಿಗಲ್ ವಿಧಾನಸಭಾ ಕ್ಷೇತ್ರದ ಮುಂದಿನ ಜೆಡಿಎಸ್ ಅಭ್ಯರ್ಥಿ ಎಸ್‌ಪಿಎಂ ಎಂದು ಪರೋಕ್ಷವಾಗಿ ಘೋಷಿಸಿದರು.
ಬುಧವಾರ, ತುರುವೆಕೆರೆ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ತೆರಳುವ ಮುನ್ನ ಪಟ್ಟಣದ ಬಿದನಗೆರೆ, ಆರ್‌ಎಂಸಿ ಸರ್ಕಲ್, ಸಾರಿಗೆ ಸಂಸ್ಥೆ ಬಸ್‌ನಿಲ್ದಾಣ, ಹುಚ್ಚಮಾಸ್ತಿಗೌಡ ಸರ್ಕಲ್ ಹಾಗೂ ಮಹಾತ್ಮಗಾಂಧಿ ಕಾಲೇಜು ಸಮೀಪ ಪುರಸಭಾ ಚುನಾವಣೆಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಫಲಿತಾಂಶ, ಮುಂಬರುವ ವಿಧಾನಸಭಾ ಚುನಾವಣೆಗಳ ದಿಕ್ಸೂಚಿಯಾಗಲಿದ್ದು, ಸದಾ ಜನಪರ ಚಿಂತನೆಯಲ್ಲಿ ಮುಳುಗಿ, ಜನಪರ ಯೋಜನೆಗಳನ್ನು ಅತ್ಯಲ್ಪ ಕಾಲದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತಂದ ಜೆಡಿಎಸ್‌ಗೆ ಮತ ನೀಡುವ ಮೂಲಕ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಲನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ರಾಜ್ಯವನ್ನಾಳುತ್ತಿರುವ ಬಿಜೆಪಿ ಸರ್ಕಾರ, ರಾಷ್ಟ್ರವನ್ನಾಳುತ್ತಿರುವ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಕಟುವಾಗಿ ಟೀಕಿಸಿದ ಅವರು, ಜನ ವಿರೋಧಿ ನೀತಿ ಅಳವಡಿಸಿರುವ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಜನ ದೂರವಿಟ್ಟು ಜೆಡಿಎಸ್ ಬೆಂಬಲಿಸುವಂತೆ ಮನವಿ ಮಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಸಂಧ್ಯಾ, ಸುರಕ್ಷಾ ವೇತನವನ್ನು ಮೂರು ಪಟ್ಟು ಹೆಚ್ಚು ಮಾಡುವ, ವಿದ್ಯಾವಂತ ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗವಕಾಸ ಕಲ್ಪಿಸುವ, ರೈತರ ಸಾಲ ಸಂಪೂರ್ಣ ಮನ್ನ ಮಾಡುವುದು ಸೇರಿದಂತೆ ಹಲವು ಭರವಸೆ ಘೋಷಿಸಿದರು.
ತಾಲೂಕಿನ ಅಂಚೇಪಾಳ್ಯದಿಂದ ನೂರಾರು ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ತೆರೆದ ವಾಹನದಲ್ಲಿ ಮಾಜಿ ಸಿಎಂರನ್ನು ಕರೆತಂದರು. ಮಾಜಿ ಸಿಎಂ ಜೊತೆಯಲ್ಲಿ ಮಾಜಿ ಶಾಸಕ ಎಸ್.ಪಿ.ಮುದ್ದಹನುಮೇಗೌಡ, ಮುಖಂಡರಾದ ಕೃಷ್ಣಪ್ಪ, ಎಚ್.ಎ.ಜಯರಾಮಯ್ಯ,ನಾಗರಾಜು, ಚಂದ್ರಶೇಖರ್, ಸದಾಖತುಲ್ಲಾ, ಸಮೀವುಲ್ಲಾ, ಐ.ಜಿ.ರಮೇಶ್, ಕೆಂಪೀರೇಗೌಡ ಸೇರಿದಂತೆ ಜೆಡಿಎಸ್ ಪುರಸಭೆ ಅಭ್ಯರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.