'ಸಂಶೋಧನೆ ಸಮಾಜಕ್ಕೆ ಕೊಡುಗೆಯಾಗಬೇಕು'
ತುಮಕೂರು: ಸಂಶೋಧನೆ ಸಮಾಜಕ್ಕೆ ಕೊಡುಗೆ ನೀಡುವಂತಿರಬೇಕು.ಮಾಹಿತಿ ಸಂಗ್ರಹಿಸುವ ತತ್ವ ಜಾಗತಿಕ ಚಿಂತನೆ, ಪ್ರಾದೇಶಿಕ ವರ್ತನೆಯಂತಿರಬೇಕು ಂ ಎಂದು ಎಸ್ಎಸ್ಐಟಿ ನಿರ್ವಹಣಾ ಶಾಸ್ತ್ರದ ನಿರ್ದೇಶಕ ಪ್ರೊ.ಹಜಮತ್ಉಲ್ಲಾ ಪ್ರತಿಪಾದಿಸಿದರು.
ಅವರು ಶಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದ ವತಿಯಿಂದ ಏರ್ಪಡಿಸಿದ್ದ ಸಂಶೋಧನಾ ವಿಧಾನ ಎಂಬ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸಂಶೋಧನೆ ಒಂದು ನಿರಂತರ ಚಟುವಟಿಕೆ. ಅದರಲ್ಲೂ ಸಂಶೋಧನಾ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ. ಈ ಜಾಗತೀಕರಣದ ಯುಗದಲ್ಲಿ ಹಲವಾರು ಸಂಶೋಧನಾ ವಿಷಯಗಳು ಲಭ್ಯವಿದ್ದು, ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಸಮಾಜಕ್ಕೆ ಕೊಡುಗೆ ನೀಡಬೇಕೆಂದು ಕರೆ ನೀಡಿದರು. ಸಮಾಜಕ್ಕೆ ಉಪಯೋಗವಾಗುವ ಸೇವಾ ಸೌಲಭ್ಯಗಳ ಬಗ್ಗೆ ಗಮನ ಹರಿಸುವಂತೆ ಕರೆ ನೀಡಿದರ ಹಜಮತ್ಉಲ್ಲಾ, ಸಂಶೋಧನೆ ವೈಯಕ್ತಿಕ ಬೆಳವಣಿಗೆಗೆ ಹಾಗೂ ಸಮಾಜಕ್ಕೆ ಅನುಕೂಲವಾಗಿರಬೇಕು ಎಂದರು. ಪಠ್ಯಕ್ರಮಕ್ಕೆ ಅನುಗುಣವಾಗಿ ವಿಷಯಗಳನ್ನು ಕೂಲಂಕಷವಾಗಿ ವಿವರಿಸಿದರು. ವಿಭಾಗದ ಮುಖ್ಯಸ್ಥ ಡಾ.ಎಸ್.ಟಿ. ರಂಗಪ್ಪ, ಸಂಶೋಧನಾ ಅವಕಾಶ ಮತ್ತು ತಂತ್ರಜ್ಞಾನದ ಯುಗದಲ್ಲಿ ಮಾಹಿತಿ ಸಂಗ್ರಹಿಸುವ ವಿಚಾರವನ್ನು ಮಂಡಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಮಲ್ಲೇಶಪ್ಪ ಮಾತನಾಡಿ, ಕಾರ್ಯಾಗಾರದ ಅನುಕೂಲತೆಯನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಕರೆ ನೀಡಿದರು. ವಿಶೇಷ ಉಪನ್ಯಾಸಗಳ ಅವಶ್ಯಕತೆ ತುಂಬಾ ಇದೆ ಎಂದರು.
ವಿಶೇಷ ಕಾರ್ಯಾಗಾರದಲ್ಲಿ ವಿಭಾಗದ ಉಪನ್ಯಾಸಕರಾದ ಗಜೇಂದ್ರ, ಹಸೀಬಾಖಾನಂ ಹಾಗೂ ಉಪನ್ಯಾಸಕ ವರ್ಗ ಹಾಗೂ ಬಿಬಿಎಂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾಶ್ರೀ ಪ್ರಾರ್ಥಿಸಿ, ಮೆಹಬೂಬ್ ಉನ್ನೀಸಾ ಕಾರ್ಯಕ್ರಮ ನಿರೂಪಿಸಿ, ಮಹಮದೀ ಬಾನು ಸ್ವಾಗತಿಸಿ, ಪ್ರೊ. ಗಜೇಂದ್ರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

