ತುಮಕೂರು

'ಚಿ.ನಾ.ಹಳ್ಳಿ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ'

Published On :

ಚಿಕ್ಕನಾಯಕನಹಳ್ಳಿ: ಪಟ್ಟಣದ ಪುರಸಭೆಗೆ ಮಾ. 7ರಂದು ನಡೆಯಲಿರುವ ಚುನಾವಣೆಯಲ್ಲಿ  ಇಲ್ಲಿನ ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗು ಉಪ-ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ  ನುಡಿದರು.  ಅವರು ಗುರುವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ತೆರೆದ ವಾಹನದಲ್ಲಿ ಮತದಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು. ಯಾವುದೇ ಚುನಾವಣೆಯಲ್ಲಿ ಮತದಾರರ ಆಯ್ಕೆ ಸಮರ್ಪಕವಾಗಿಲ್ಲದಿದ್ದರೆ, ಅಭಿವೃದ್ಧಿ ಕುಂಠಿತವಾಗುತ್ತದೆ ಎಂಬುದಕ್ಕೆ ಇಲ್ಲಿನ ಪುರಸಭೆಯ ಆಡಳಿತ ವೈಖರಿಯೇ ಸಾಕ್ಷಿ. ರಾಜ್ಯ ಸರ್ಕಾರ ಕೋಟಿಗಟ್ಟಲೆ ಅನುದಾನ ನೀಡಿದ್ದರೂ ಪಟ್ಟಣದ ಅಭಿವೃದ್ಧಿ ಕಿಂಚಿತ್ತೂ ನಡೆದಿಲ್ಲ. ಅನುದಾನದ ಅಸಮರ್ಪಕ ಬಳಕೆಯೇ ಇದಕ್ಕೆ ಕಾರಣ. ಆದ್ದರಿಂದ ನಿಮ್ಮ ಆಯ್ಕೆ ಪ್ರಜ್ಞಾಪೂರ್ವಕವಾಗಿದ್ದರೆ, ಅಭಿವೃದ್ಧಿ ಅದಕ್ಕೆ ಪೂರಕವಾಗಿರುತ್ತದೆ. ಇಲ್ಲಿನ ನೆರೆದಿರುವ ಮತದಾರರೆಲ್ಲಾ ಪ್ರಾಮಾಣಿಕವಾಗಿ ಯಾವುದೇ ಹಣದ ಅಮಿಷಕ್ಕೊಳಗಾಗದೆ ಬಂದಿರುವವರು.ಇವರನ್ನು ಯಾರು ಹಣಕೊಟ್ಟು ಕರೆಸಿಲ್ಲ. ಆದ್ದರಿಂದ ಈ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ಕೆ.ಎಸ್. ಕಿರಣ್‌ಕುಮಾರ್ ಗೆಲವು ನಿಶ್ಚಿತ ಎಂದರು. ಕಳೆದ ಬಾರಿ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಮ್ಮ ಪಕ್ಷ 1400 ಸ್ಥಾನಗಳನ್ನು ಗೆದ್ದಿತ್ತು, ಅದು ಈ ಬಾರಿ 2800 ಆಗಲಿದೆ. ನಮ್ಮ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು ಪ್ರಾಮಾಣಿಕರು, ನಿಮ್ಮ ಸೇವೆಗಾಗಿ ಕೈಂಕರ್ಯ ತೊಟ್ಟು ಬಂದಿರುವವರು. ಆದ್ದರಿಂದ ನಮ್ಮ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಪಟ್ಟಣದ ಅಭಿವೃದ್ಧಿಗೆ ಸಹಕರಿಸಿ ಎಂದು ಅವರು ಕರೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.