ಕುಣಿಗಲ್: ಶೈಕ್ಷಣಿಕ ವರ್ಷಾಂತ್ಯದಲ್ಲಿ ಕಾಂಗ್ರೆಸ್ ಮುಖಂಡರಿಗೆ ಸೇರಿದ ಟ್ರಸ್ಟ್‌ವೊಂದು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮಾಡಿದನ್ನು, ಬೇರೆ ರಾಜಕೀಯ ಪಕ್ಷಗಳ ಮುಖಂಡರು, ಖಂಡಿಸಿದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶೈಕ್ಷಣಿಕ ವರ್ಷಾಂತ್ಯದಲ್ಲಿ ಇಂತಹ ಯಾವುದೇ ವಿತರಣೆಗೆ ಕ್ರಮ ಕೈಗೊಳ್ಳದಂತೆ ಆದೇಶ ನೀಡಿರುವ ಸಂಗತಿ ವರದಿಯಾಗಿದೆ. ಕಾಂಗ್ರೆಸ್ ಮುಖಂಡರಿಗೆ ಸೇರಿದ (ಸಿ.ಎಂ.ನಾಗರಾಜ್ ಟ್ರಸ್ಟ್ ಫೌಂಡೇಶನ್) ಟ್ರಸ್ಟ್ ವತಿಯಿಂದ ಕೊತ್ತಗೆರೆ ಹೋಬಳಿಯಲ್ಲಿ ಜನಸ್ಪಂದನ ಸಭೆ ನಡೆಸಿ, ಹೋಬಳಿಯ ವಿವಿಧ ಸರ್ಕಾರಿ ಶಾಲೆಗಳಲ್ಲಿ ಫೌಂಡೇಶನ್ ಹಾಗೂ ಕಾಂಗ್ರೆಸ್ ಮುಖಂಡರ ಭಾವಚಿತ್ರ ಇರುವ ನೋಟ್ ಪುಸ್ತಕಗಳನ್ನು ಉಚಿತವಾಗಿ ಹಂಚುತ್ತಿದ್ದರೆನ್ನಲಾಗಿದೆ, ಇದು ಕಾಂಗ್ರೆಸ್‌ನ ಮತ್ತೊಂದು ಗುಂಪು, ಜೆಡಿಎಸ್ ಹಾಗೂ ಬಿಜೆಪಿ ಮುಖಂಡರನ್ನು ಕೆರಳಿಸಿತಲ್ಲದೆ, ಶೈಕ್ಷಣಿಕ ವರ್ಷದ ಕೊನೆಯಲ್ಲಿ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಹಂಚುವುದು ಎಷ್ಟರ ಮಟ್ಟಿಗೆ ಸರಿ, ಈ ಕಾರ್ಯಕ್ರಮ ಸಂಪೂರ್ಣ ರಾಜಕೀಯ ಉದ್ದೇಶದಿಂದ ಕೂಡಿದ್ದು, ಕೂಡಲೆ ಇದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಕ್ಷೇತ್ರಶಿಕ್ಷಣಾಧಿಕಾರಿ ಅವರನ್ನು ಬೇರೆ ಬೇರೆ ರಾಜಕೀಯ ಪಕ್ಷಗಳ ಮುಖಂಡರು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ, ಎಚ್ಚೆತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ ಸೇರಿದಂತೆ ಯಾವುದೇ ತರಹದ ದೇಣಿಗೆ ಪಡೆಯದಂತೆ, ಒಂದು ವೇಳೆ ಪಡೆದಿದ್ದು, ಅದರಿಂದಾಗುವ ಯಾವುದೇ ಸಮಸ್ಯೆಗೆ ಸಂಬಂಧಪಟ್ಟ ಶಿಕ್ಷಕರನ್ನೇ ಹೊಣೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿ ಆದೇಶ ಹೊರಡಿಸಿದ್ದಾರೆ.
25ರಂದು ಸಭೆ
ತುರುವೇಕೆರೆ: ಆದಿಚುಂಚನಗಿರಿ ಮಠಾಧ್ಯಕ್ಷರಾಗಿದ್ದ ಡಾಣಣಬಾಲಗಂಗಾಧರನಾಥ ಸ್ವಾಮಿಗಳ ಪುಣ್ಯಾರಾಧನೆಯನ್ನು ಆಚರಿಸುವ ಸಲುವಾಗಿ ಜ. 25 ರಂದು ಪಟ್ಟಣದ ಸರಸ್ವತಿ ಬಾಲಿಕಾ ಪ್ರೌಢಶಾಲೆಯಲ್ಲಿ ಸಾಯಂಕಾಲ 4.30 ಕ್ಕೆ ಪೂರ್ವಭಾವಿ ಸಭೆಯನ್ನು ಕಲ್ಪತರು ಆಶ್ರಮದ ಶಿವಕುಮಾರನಾಥ ಸ್ವಾಮಿಯವರ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಭಕ್ತಾದಿಗಳು ಸಕಾಲಕ್ಕೆ ಆಗಮಿಸಲು ಪುಣ್ಯಾರಾಧನಾ ಸಮಿತಿಯ ತಿಳಿಸಲಾಗಿದೆ.