ತುಮಕೂರು

ಸಂಸ್ಕೃತ ಜನಪ್ರಿಯಗೊಳಿಸುವ ಅಗತ್ಯವಿದೆ: ಸಚಿವ ಸೊಗಡು

Published On :

ತುಮಕೂರು: ಸಂಸ್ಕೃತವನ್ನು ಜನಸಾಮಾನ್ಯರ ನಡುವೆ ಜನಪ್ರಿಯಗೊಳಿಸುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಶಿವಣ್ಣ ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯ ಹಾಗೂ ಸಂಸ್ಕೃತ ಭಾರತೀ ಆಶ್ರಯದಲ್ಲಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಜನವರಿ 26 ಹಾಗೂ 27 ರಂದು ನಡೆಯಲಿರುವ ರಾಜ್ಯಮಟ್ಟದ ಸಂಸ್ಕೃತ ವಿದ್ಯಾರ್ಥಿ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಭಾರತದ ಪ್ರಾಚೀನ ವೈಜ್ಞಾನಿಕ ಸಾಧನೆಗಳ ಜ್ಞಾನವಾಹಿನಿ ಪ್ರದರ್ಶನವನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಎಲ್ಲಾ ವರ್ಗಗಳಲ್ಲೂ ಸಂಸ್ಕೃತ ಪ್ರೀತಿಯನ್ನು ಬಿತ್ತುವ ಅವಶ್ಯಕತೆಯಿದೆ ಎಂದರು.
ಪ್ರಾಚೀನ ಭಾರತ ಜಗತ್ತಿನ ವಿವಿಧ ಶಾಸ್ತ್ರಗಳಿಗೆ ನೀಡಿದ ಕೊಡುಗೆಯನ್ನು ಸಮಗ್ರವಾಗಿ ವಿವರಿಸುವ ಈ ವಸ್ತುಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಿ ಹೆಚ್ಚಿನ ಜ್ಞಾನವನ್ನು ಪಡೆದುಕೊಳ್ಳಬಹುದು ಎಂದರು.
ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಡಿ. ಶಿವಲಿಂಗಯ್ಯ ಮಾತನಾಡಿ, ವಿಶ್ವವಿದ್ಯಾನಿಲಯವು ಬೋಧನೆ, ಸಂಶೋಧನೆ ಹಾಗೂ ವಿಸ್ತರಣೆಗಳೆಂಬ ಉನ್ನತ ಶಿಕ್ಷಣದ ಮೂಲಧ್ಯೇಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ ಎಂದರು.
ಸಂಸ್ಕೃತ ಭಾರತಿ ಆಯೋಜಿಸಿರುವ ಪ್ರದರ್ಶನವು ನಿಜಕ್ಕೂ ಅರ್ಥಪೂರ್ಣವಾಗಿದೆ. ಪ್ರಾಚೀನ ಭಾರತದ ಜ್ಞಾನ ಶ್ರೀಮಂತಿಕೆಯನ್ನು ಇದು ಅತ್ಯಂತ ಸಮರ್ಥವಾಗಿ ಪ್ರತಿಬಿಂಬಿಸಿದೆ. ಇದು ಜ್ಞಾನದ ವಿಶ್ವಕೋಶದಂತಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್, ಮಾರುತಿ ಇಂಟರ್ ನ್ಯಾಷನಲ್ ಸ್ಕೂಲ್ ನಿರ್ದೇಶಕ ಜಿ.ವಿ. ಶ್ರೀನಿವಾಸಮೂರ್ತಿ, ಎಂ.ಕೆ. ನಾಗರಾಜರಾವ್ ಉಪಸ್ಥಿತರಿದ್ದರು.
ಪ್ರದರ್ಶನ ಜನವರಿ 27 ರವರೆಗೆ ತೆರೆದಿದ್ದು, ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ.
 ವಿಜ್ಞಾನದ ವಿವಿಧ ಶಾಖೆಗಳು, ವೈದ್ಯಕೀಯ, ತಂತ್ರಜ್ಞಾನ, ಗಣಿತಶಾಸ್ತ್ರ, ಖಗೋಳಶಾಸ್ತ್ರ ಮುಂತಾದ ಕ್ಷೇತ್ರಗಳಿಗೆ ಪ್ರಾಚೀನ ಭಾರತದ ಕೊಡುಗೆಯನ್ನು ಪ್ರದರ್ಶನ ತೆರೆದಿಟ್ಟಿದೆ. ಸಂಸ್ಕೃತ ವಿಕಿಪೀಡಿಯ, ಸಂಸ್ಕೃತ ಶಾಲಾ, ಸಂಸ್ಕೃತಗೃಹಮ್, ಪುಸ್ತಕ ಪ್ರದರ್ಶನ ಮತ್ತು ಮಾರಾಟ ವಸ್ತುಪ್ರದರ್ಶನದ ಇತರ ವೈಶಿಷ್ಟ್ಯಗಳಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.