ಸಹಕಾರ ಸಂಘದ ಸಾಲ ಸದುದ್ದೇಶಕ್ಕೆ ಬಳಸಿ: ರಾಜ್ಕುಮಾರ್
ಚಿಕ್ಕನಾಯಕನಹಳ್ಳಿ: ರೈತರು ಆರ್ಥಿಕ ಸಂಸ್ಥೆಗಳಲ್ಲಿ ಸಾಲಪಡೆಯುವುದು ಹೇಗೆ ಅವರ ಹಕ್ಕೋ ಮರುಪಾವತಿಯು ಸಹ ಅವರ ಕರ್ತವ್ಯವಾಗಿದೆ ಎಂಬುದನ್ನು ಮರೆಯಬಾರದು ಎಂದು ಜಿಲ್ಲಾ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜಕುಮಾರ್ ನುಡಿದರು.
ಅವರು ತಾಲೂಕಿನ ಹಿಂದುಳಿದ ಪ್ರದೇಶವಾದ ರಾಮನಹಳ್ಳಿ ಪಿಎಸಿಬಿ ಬ್ಯಾಂಕ್ ವತಿಯಿಂದ ಏರ್ಪಡಿಸಲಾಗಿದ್ದ, ಸಂಘದಲ್ಲಿ ಇದುವರೆಗೂ ಸಾಲ ಸಿಗದ ನೂತನ ಸದಸ್ಯರಿಗೆ ಸಾಲದ ಚೆಕ್ ವಿತರಿಸಿ ಮಾತನಾಡುತ್ತಿದ್ದರು. ರೈತರು ಕೃಷಿ ಅಭಿವೃದ್ಧಿಗೆಂದು ಸಾಲ ಪಡೆದು ಅದನ್ನು ಬೇರೆ ಉದ್ದೇಶಕ್ಕೆ ಬಳಸುವುದರಿಂದ ಸಾಲದ ಮರುಪಾವತಿ ಮಾಡುವಲ್ಲಿ ರೈತ ವಿಫಲನಾಗುತ್ತಿದ್ದಾನೆ. ಆದ್ದರಿಂದ ಹಣಕಾಸು ಸಂಸ್ಥೆಗಳಲ್ಲಿ ವಿಶ್ವಾಸ ಕಳೆದುಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಅಪಾಯ ಎದುರಾಗುತ್ತದೆ. ಆದ್ದರಿಂದ ತಾವು ಪಡೆದ ಸಾಲವನ್ನು ಸದುದ್ದೇಶಕ್ಕೆ ಬಳಸಿ ಆರ್ಥಿಕವಾಗಿ ಸದೃಢರಾಗಬೇಕು. ರೈತರು ಕೃಷಿಗೆ ಪೂರಕವಾಗಿ ಉಪಕಸುಬುಗಳಾದ ಹೈನುಗಾರಿಕೆ, ಕುರಿಸಾಕಣೆ, ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕುಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

