ತುಮಕೂರು

'ಮಹಿಳಾ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲ'

Published On :

ತಿಪಟೂರು: ಸ್ವಾತಂತ್ರ್ಯ ನಂತರ ಸ್ಥಾಪಿತವಾದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಸುಧಾರಣೆಗೆ ಸಾಕಷ್ಟು ಕ್ರಮಗಳನ್ನು ದೇಶ ತೆಗೆದುಕೊಂಡಿದ್ದರೂ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಬೀಳದಿರುವುದು ನಿಜಕ್ಕೂ ದುರಂತದ ಸಂಗತಿ ಎಂದು ಉಪವಿಭಾಗಾಧಿಕಾರಿ ಎಂ. ಶಿಲ್ಪ ತಿಳಿಸಿದರು.
ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 64ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ಘನತೆ, ಗೌರವ ಕಾಪಾಡುವಲ್ಲಿ ಪ್ರತಿಯೊಬ್ಬ ಪ್ರಜೆಯೂ ಆಡಳಿತದಲ್ಲಿ ಭಾಗಿಯಾಗಬೇಕು. ಹಾಗೆಯೇ ದೇಶದಲ್ಲಿ ಐಕ್ಯತೆ, ಒಗ್ಗಟ್ಟು ಮತ್ತು ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಬೇಕೆಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಬಿ.ಸಿ. ನಾಗೇಶ್, ರಾಷ್ಟ್ರೀಯ ಹಬ್ಬಗಳು ಕೇವಲ ಆಚರಣೆಗಷ್ಟೇ ಸಿಮಿತವಾಗದೆ ದೇಶದ ಮಹಾನ್ ಸಾಧಕರ ಸಾಧನೆಗಳು ಮತ್ತು ಆದರ್ಶಗಳನ್ನು ಬಿಂಬಿಸುವಂತಿರಬೇಕು. ರಾಷ್ಟ್ರೀಯ ಹಬ್ಬಗಳ ಮೂಲಕ ಮಕ್ಕಳಲ್ಲಿ ರಾಷ್ಟ್ರ ಪ್ರೇಮ ಬೆಳೆಸುವಂತಿರಬೇಕೆಂದರು. ರಾಷ್ಟ್ರ ಈ ಹಂತಕ್ಕೆ ಬರುವಲ್ಲಿ ಶ್ರಮಿಸಿದ ಎಲ್ಲಾ ಮಹನೀಯರ ಬದುಕಿನ ಮೌಲ್ಯಗಳನ್ನು ಇಂದಿನ ಯುವ ಜನತೆ ಅರಿಯಬೇಕಾಗಿದೆ ಎಂದರು.
ನಗರಸಭೆ ಅಧ್ಯಕ್ಷ ಟಿ.ಎನ್. ಪ್ರಕಾಶ್, ಎಪಿಎಂಸಿ ಅಧ್ಯಕ್ಷ ದಿವಾಕರ್, ಮಾಜಿ ಶಾಸಕ ಎಸ್.ಪಿ. ಗಂಗಾಧರಪ್ಪ, ಸ್ವಾತಂತ್ಯ್ರ ಹೋರಾಟಗಾರರಾದ ಗೋವಿಂದಪ್ಪ, ಶ್ರೀನಿವಾಸ್ ಸೇರಿದಂತೆ ವಿವಿಧ ಸ್ಥಳೀಯ ಮಾಜಿ ಹಾಗೂ ಹಾಲಿ ಜನಪ್ರತಿನಿಧಿಗಳು, ಇಲಾಖಾ ನೌಕರರುಗಳು ಭಾಗವಹಿಸಿದ್ದರು.
ನಂತರ ವಿದ್ಯಾರ್ಥಿಗಳಿಂದ ಕವಾಯಿತು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಉತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಹಾಗೂ ತಾಲ್ಲೂಕಿನ ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಂಪ್ಯೂಟರರ್ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.