ತುಮಕೂರು

ರಾಷ್ಟ್ರಧ್ವಜ ನೆಲಕ್ಕೆ: ದಸಂಸ ಖಂಡನೆ

Published On :


ಶಿರಾ: ಪಟ್ಟಣದ ವಿವೇಕಾನಂದ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ 64ನೇ ಗಣರಾಜ್ಯೋತ್ಸವ ಆಚರಣೆ ಸಂದರ್ಭ ಧ್ವಜಾರೋಹಣ ಮಾಡುವಾಗ ಧ್ವಜದ ಹಗ್ಗ ತುಂಡಾಗಿ ಕೆಳಗೆ ಬಿದ್ದಿರುವುದು ಅತ್ಯಂತ ಖಂಡನೀಯ ಎಂದು ತಾಲೂಕು ದಸಂಸ ಸಂಚಾಲಕ ಲಕ್ಷ್ಮೀಕಾಂತ್ ತಿಳಿಸಿದ್ದಾರೆ. ಕ್ಷೇತ್ರದ ಶಾಸಕರು ತಾಲೂಕುಮಟ್ಟದ ಅಧಿಕಾರಿಗಳ ಸಮ್ಮುಖ ಇಂತಹ ಅಚಾತುರ್ಯ ನಡೆದಿರುವುದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ. ರಾಷ್ಟ್ರಧ್ವಜ ಕಂಬಕ್ಕೆ ಏರಿಸಿ ಕಟ್ಟುವ ಸಂದರ್ಭ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಉದ್ದೇಶಪೂರ್ವಕವಾಗಿ ದಲಿತ ಸಮುದಾಯದ ತಹಸೀಲ್ದಾರ್ ಧ್ವಜಾರೋಹಣ ಮಾಡಬಾರದೆಂದು ಕಾರಣದಿಂದ ನಡೆದಿರುವ ಬಗ್ಗೆ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಬೇಕೆಂದಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.