ಕೃಷಿಕರು ವ್ಯವಸಾಯದಿಂದ ವಿಮುಖರಾಗುತ್ತಿದ್ದಾರೆ: ವಿಷಾದ
ಶಿರಾ: ಕೃಷಿ ಭೂಮಿ ಕೈಗಾರಿಕಾ ಅಭಿವೃದ್ಧಿ ನೆಪದಲ್ಲಿ ಉಳ್ಳವರ ಸ್ವತ್ತಾಗುತ್ತಿದೆ. ಮಳೆ ಅಭಾವ ಅಂತರ್ಜಲ ಕುಸಿತದಿಂದ ಕೃಷಿಕರು ವ್ಯವಸಾಯದಿಂದ ವಿಮುಖರಾಗುತ್ತಿದ್ದಾರೆ ಎಂದು ಪ.ನಾ.ಹಳ್ಳಿ ಮಠದ ಶ್ರೀ ನಂಜಾವಧೂತ ಸ್ವಾಮಿಗಳು ವಿಷಾದಿಸಿದರು.
ಅವರು ತಾಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಐತಿಹಾಸಿಕ ಪ್ರಸಿದ್ಧ ಓಂಕಾರೇಶ್ವರ ಸ್ವಾಮಿ ಕಲ್ಲುಗಾಲಿ ರಥಕ್ಕೆ ಪೂಜೆ, ಕಳಸ ಪ್ರತಿಷ್ಠಾಪನೆ ಮಾಡಿ ಜಾತ್ರೋತ್ಸವಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಭಕ್ತರಿಗೆ ಆರ್ಶೀವಚನ ನೀಡುತ್ತ ರೈತರು ಹಳ್ಳಿಗಳನ್ನು ಬಿಟ್ಟು ಹೊಲಸೆ ಹೋಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಗೆ ಆತ್ಮಸ್ಥೈರ್ಯ ತುಂಬಿ ಕಡಿಮೆ ನೀರಿನಲ್ಲಿ ಹೆಚ್ಚು ಆದಾಯ ಬರುವಂತೆ ಕೃಷಿ ಪದ್ಧತಿಯ ಜ್ಞಾನವನ್ನು ತಿಳಿಸಿಕೊಡಬೇಕು. ಹೀಗಾಗಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವನ್ನು ಜಾತ್ರೆಯಲ್ಲಿ ಏರ್ಪಡಿಸಲಾಗಿದೆ ಎಂದರು.
ಕಳೆದ 12 ವರ್ಷಗಳಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವನ್ನು ಶ್ರೀ ಮಠ ನಡೆಸುತ್ತಿದೆ. ನೂತನ ಬೆಳೆ ಪದ್ಧತಿ ಕುರಿತು ಕಾರ್ಯಾಗಾರ, ವಿಜ್ಞಾನ ಮತ್ತು ಕೃಷಿ ಅಧಿಕಾರಿಗಳೊಂದಿಗೆ ರೈತರ ಚರ್ಚೆ, ಕೃಷಿಯಲ್ಲಿ ಬದಲಾವಣೆ, ಆರ್ಥಿಕ ಪ್ರಗತಿ, ಕೃಷಿ ಮೇಲಿನ ಜವಾಬ್ದಾರಿ ಕುರಿತಂತೆ ಅರಿವು ಮೂಡಿಸಲಾಗುತ್ತಿದೆ.
ಸ್ತ್ರೀಶಕ್ತಿ ಸ್ವಸಹಾಯ ಸಂಘ, ಶ್ರೀ ಮಂಜುನಾಥ ಸ್ವಾಮಿ ಗ್ರಾಮೀಣಾಭಿವೃದ್ಧಿ ಸಂಘಗಳ ಆರ್ಥಿಕ ನೆರವಿನಿಂದ ಗ್ರಾಮೀಣ ಜನರು ಹೈನುಗಾರಿಕೆ, ಗುಡಿ ಕೈಗಾರಿಕೆಗಳನ್ನು ಅಳವಡಿಸಿಕೊಂಡು ಸ್ವಾವಲಂಬಿಗಳಾಗುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಕಡಿಮೆ ನೀರು ಬಳಸಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಬೇಕು. ಮೀನು ಸಾಕಾಣಿಕೆಗೆ ಹೆಚ್ಚು ಒತ್ತು ನೀಡಬೇಕು ಎಂದರು.
ದನಗಳಜಾತ್ರೆಯಲ್ಲಿ ಅತ್ಯತ್ತಮ ರಾಸುಗಳಿಗೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

