ಯುವ ಜೆಡಿಎಸ್‌ಗೆ ನಬಿಲ್ ಕೆ.ಪಾಳ್ಯ ರಾಜಿನಾಮೆ
ಮಧುಗಿರಿ: ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ್ದ ಭರವಸೆ ಈಡೇರದಿರುವ ಹಿನ್ನೆಲೆಯಲ್ಲಿ ಬೇಸತ್ತು ಜಿಲ್ಲಾ ಯುವ ಜೆಡಿಎಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ನಬಿಲ್ ಕೆ.ಪಾಳ್ಯ ತಿಳಿಸಿದ್ದಾರೆ.
ಇಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ,ಮಧುಗಿರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಅನಿತಾಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಗೆಲ್ಲಿಸಿದ್ದವು. ನಂತರದ ದಿನಗಳಲ್ಲಿ ಕಾರ್ಯಕರ್ತರನ್ನು ಸಂಪೂರ್ಣ ಕಡೆಗಣಿಸಿದ್ದು, ನಮ್ಮ ಸಮಸ್ಯೆಗಳಿಗೆ ಸ್ಪಂದಿಸದಿರುವ ಕಾರಣ ಮನಸ್ಸಿಗೆ ನೋವುಂಟಾಗಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಕೃಷ್ಣಪ್ಪ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಈ ರಾಜ್ಯದ ಸಿಎಂ ಆಗಬೇಕು ಎಂಬುದು ನಮ್ಮದಾಗಿದ್ದು, ಸೂಕ್ತ ಸಮಯದಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದಾಗಿ ತಿಳಿಸಿದ ಅವರು, ರಾಜಣ್ಣ ಅವರ ಕೈ ಬಲಪಡಿಸಿ ಅವರ ಗೆಲವಿಗೆ ಪ್ರಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು. ಚಿನಕವಜ್ರ ಗ್ರಾ.ಪಂ.ಮಾಜಿ ಅಧ್ಯಕ್ಷ ರಾಜಪ್ಪ, ನಾರಾಯಣ್, ಗುತ್ತಿಗೆದಾರ ರಾಧೇಶ್ಯಾಮ್, ಶಿವಣ್ಣ, ಬ್ಯಾಟಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

