ಯುವ ಸಮ್ಮೇಳನಕ್ಕೆ 5 ಸಾವಿರ ಮಂದಿ ನಿರೀಕ್ಷೆ
ತುಮಕೂರು: ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮ, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಶಿರಾ ನಗರದ ರಾಮಕೃಷ್ಣ-ಶಾರದಾ ಸತ್ಸಂಗ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ 151 ನೆ ಜನ್ಮದಿನೋತ್ಸವ ಹಾಗೂ ಯುವ ಸಮ್ಮೇಳನ ಕಾರ್ಯಕ್ರಮವು ಶಿರಾ ನಗರದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಫೆಬ್ರವರಿ 1 ರಂದು ನಡೆಯಲಿದ್ದು 5 ಸಾವಿರ ಯುವ ಜನತೆ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಸ್ವಾಮಿ ವಿವೇಕಾನಂದರ ಜಯಂತಿಯನ್ನು ಅಭೂತಪೂರ್ವವಾಗಿ ನಡೆಸಲು ಶಿರಾ ನಗರದ ಮಹಾಜನತೆ ಸಜ್ಜಾಗಿದ್ದು, ತಾಲೂಕಿನ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಂದ ಸುಮಾರು ಐದು ಸಹಸ್ರ ಕಾಲೇಜು ವಿದ್ಯಾರ್ಥಿಗಳು ಯುವ ಸಮ್ಮೇಳನದಲ್ಲಿ ಭಾಗವಹಿಸುವರೆಂದು ಆಶ್ರಮದ ಪ್ರಕಟಣೆ ತಿಳಿಸಿದೆ. ತುಮಕೂರಿನ ಆಶ್ರಮದ ಮುಖ್ಯಸ್ಥ ಸ್ವಾಮಿ ವೀರೇಶಾನಂದ ಸರಸ್ವತೀಯವರು ಸಮ್ಮೇಳನದ ನೇತೃತ್ವ ವಹಿಸಿ, ಯುವಶಕ್ತಿಗೆ ಸ್ವಾಮಿ ವಿವೇಕಾನಂದರ ಉಕ್ತಿ ಎಂಬ ವಿಷಯವನ್ನು ಕುರಿತು ಪ್ರವಚನ ನೀಡುವರು.
ಶಿರಾ ಶಾಸಕ ಟಿ.ಬಿ. ಜಯಚಂದ್ರರವರು ಸಮ್ಮೇಳನದ ಉದ್ಘಾಟನೆ ನೆರವೇರಿಸುವರು. ರಾಣೆಬೆನ್ನೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಮುಖ್ಯಸ್ಥ ಸ್ವಾಮಿ ಪ್ರಕಾಶಾನಂದರು, ಸ್ವಾಮಿ ವಿವೇಕಾನಂದರು ಮತ್ತು ಸೇವಾತತ್ತ ಮತ್ತು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಅನುಸೂಯರವರು, ಸ್ವಾಮಿ ವಿವೇಕಾನಂದರ ವೈಜ್ಞಾನಿಕ ದೃಷ್ಟಿಕೋನ ಎಂಬ ವಿಷಯವನ್ನು ಕುರಿತು ವಿಶೇಷ ಉಪನ್ಯಾಸಗಳನ್ನು ನೀಡುವರು.
ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಪ್ರಕಾಶ್, ಜಿಲ್ಲಾ ಕ್ರೀಡಾಧಿಕಾರಿ ಸಿಬಿರಂಗಯ್ಯ, ಶಿರಾ ನಗರಸಭಾ ಆಯುಕ್ತ ರಂಗಸ್ವಾಮಿ, ಮೂಡಲಗಿರಿಗೌಡರು, ಕ್ಷೇತ್ರ ಶಿಕ್ಷಣಾಧಿಕಾರಿ ರಾಜ್‌ಕುಮಾರ್ ಸಮಾಜ ಸೇವಕರು, ಚಿರತೆಹಳ್ಳಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮಧ್ಯಾಹ್ನ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಬಿ. ಸತ್ಯನಾರಾಯಣರವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶಿರಾ ನಗರಸಭಾಧ್ಯಕ್ಷ ರಘು, ಶಿಕ್ಷಣ ತಜ್ಞ ಅಶೋಕ್‌ಕುಮಾರ್ ಮತ್ತು ಚಿದಾನಂದ್ ಮೊದಲಾದವರು ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

