ಮದ್ಯದಂಗಡಿ ತೆರೆಯುವುದಕ್ಕೆ ವಿರೋಧ, ಪ್ರತಿಭಟನೆ
ಪಾವಗಡ: ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಕಿರ್ಲಾಲಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಅನೇಕ ಮಹಿಳಾ ಸಂಘಟನೆಗಳು ಸೇರಿದಂತೆ ನೂರಾರು ಮಂದಿ ಸಾರ್ವಜನಿಕರು ಬುಧವಾರ ತಾಲೂಕು ಕಚೇರಿ ಹಾಗೂ ಅಬಕಾರಿ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಿರ್ಲಾಲಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ವಿರೋಧ ನಡುವೆಯು ವ್ಯಕ್ತಿಯೊಬ್ಬರು ಮಳಿಗೆಯೊಂದನ್ನು ಖರೀದಿಸಿ ಅಕ್ರಮ ಮದ್ಯದಂಗಡಿ ತೆರೆಯಲು ಮುಂದಾಗಿದ್ದು ಕಳೆದ 3ದಿನಗಳಿಂದ ಮದ್ಯ ಮಾರಾಟದಲ್ಲಿ ನಿರತರಾಗಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಇಲ್ಲಿ ಮದ್ಯ ಮಾರಾಟದ ಅಂಗಡಿ ಬೇಡವೆಂದು ಗ್ರಾಮಸ್ಥರೆಲ್ಲಾ ವಿರೋಧ ವ್ಯಕ್ತಪಡಿಸಿದ್ದರೂ ಕಿರ್ಲಾಲಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಸ್ತ್ರಿಶಕ್ತಿ ಹಾಗೂ ಸ್ವಸಹಾಯಕ ಸಂಘಗಳ ನೂರಾರು ಮಹಿಳೆಯರು ಸೇರಿದಂತೆ ರೊಚ್ಚಿಗೆದ್ದು ಮದ್ಯ ಮಾರಾಟವನ್ನು ಕೂಡಲೇ ತಡೆಗಟ್ಟುವಂತೆ ಪಟ್ಟಣದ ತಾಲೂಕು ಕಚೇರಿ ಹಾಗೂ ಅಬಕಾರಿ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕಿರ್ಲಾಲಹಳ್ಳಿ ಗ್ರಾಮದ ಯುವ ಮುಖಂಡ ಕೃಷ್ಣಮೂರ್ತಿ ಸಂಪೂರ್ಣ ಸಾಕ್ಷರತೆ ಹೊಂದಿದ ಕಿರ್ಲಾಲಹಳ್ಳಿ ಚಿಕ್ಕ ಗ್ರಾಮ, ಈಗಾಗಲೆ ಗ್ರಾಮದಲ್ಲಿ ಮದ್ಯ ಮಾರಾಟದಲ್ಲಿ ವ್ಯಕ್ತಿಯೊಬ್ಬರು ನಿರತರಾಗಿದ್ದಾರೆ. ಇದರಿಂದ ಬಡವರು ಬೀದಿ ಪಾಲಾಗುತ್ತಾರೆ ಎಂದು ಆರೋಪಿಸಿದರು. ಅಲ್ಲದೇ ವೈನ್ ಸೆಂಟರ್ ತೆರೆಯುವ ಮಳಿಗೆಯ ಅಕ್ಕಪಕ್ಕದಲ್ಲಿಯೆ ಬಸ್ ಶೆಲ್ಟರ್, ಸರ್ಕಾರಿ ಪ್ರಾಥಮಿಕಾ ಶಾಲೆ, ಪ್ರೌಢಶಾಲೆ ಹಾಗೂ ಸರ್ಕಾರಿ ಪಿಯು ಕಾಲೇಜು ಸೇರಿದಂತೆ ಎಸ್ಸಿ, ಎಸ್.ಟಿ ಹಾಗೂ ಬಿಸಿಎಂ ವಿದ್ಯಾರ್ಥಿ ನಿಲಯಗಳಿರುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗಲಿದೆ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರೆಲ್ಲ ಕಿರ್ಲಾಲಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟದ ಅಂಗಡಿ ಬೇಡವೇ ಬೇಡ ಎಂದು ಒತ್ತಾಯಿಸಿ ತಹಸೀಲ್ದಾರ್ ಚನ್ನಬಸಪ್ಪ ಅವರಿಗೆ ಮನವಿ ನೀಡಿದರು. ಪ್ರತಿಭಟನೆಯಲ್ಲಿ ಸ್ತ್ರೀ ಶಕ್ತಿ ಸ್ವಸಹಾಯಕ ಸಂಘಗಳ ಮಹಿಳೆಯರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

