ತುಮಕೂರು

ಸಾಹಿತ್ಯ ಸಮ್ಮೇಳನದಲ್ಲಿ ಗುರುಮೂರ್ತಿಗೆ ಅಭಿನಂದನೆ

Published On :

ಕ.ಪ್ರ. ವಾರ್ತೆ ,  ಚಿಕ್ಕನಾಯಕನಹಳ್ಳಿ ,  ಜು.2
ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸಲ್ಲಿಸಿರುವ ಕೊಟಿಗೆಮನೆ ಸಿ.ಗುರುಮೂರ್ತಿಯವರನ್ನು 9ನೇ ಸಾಹಿತ್ಯ ಸಮ್ಮೇಳನದಲ್ಲಿ ಅಭಿನಂದಿಸಲಾಯಿತು.
ಚಿಗುರು ಹೆಸರಿನಿಂದ ಸಮಾಜದ ಅನೇಕ ಜ್ವಲಂತ ಸಮಸ್ಯೆಗಳ ಮೇಲೆ ಪರಿಣಾಮಕಾರಿ ಲೇಖನಗಳನ್ನು ಬರೆದು ಅಧಿಕಾರಶಾಹಿಯ ಕಣ್ಣುತೆರೆಸಿದ್ದಾರೆ  ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ನುಡಿದರು. ಸಿ.ಗುರುಮೂರ್ತಿಯವರನ್ನು ಸನ್ಮಾನಿಸಿ ಮಾತನಾಡುತ್ತಾ, ಆಡುಮುಟ್ಟದ ಸೊಪ್ಪಿಲ್ಲ ಎಂಬ ಗಾದೆಯಂತೆ ಸಿ.ಗುರುಮೂರ್ತಿಯವರು  ಮುದ್ರಣ ಮಾಧ್ಯಮ ಮತ್ತು ದೃಶ್ಯಮಾಧ್ಯಮ ಎರಡರಲ್ಲೂ ತಮ್ಮ ಪ್ರತಿಭೆಯನ್ನು ತೋರಿದ್ದಾರೆ. ಈ ಹಂತಕ್ಕೆ ಬರಬೇಕಾದರೆ ಅವರು ಸಾಕಷ್ಟು ಕೃಷಿ ಮಾಡಿದ್ದಾರೆ ಎಂದರೆ ತಪ್ಪಾಗಲಾರದು. ಕಳೆದ 20 ವರ್ಷಗಳಿಂದ ಈ ರಂಗದಲ್ಲಿ ಕಾರ್ಯನಿರ್ವಹಿಸಿ ಈ ರಂಗದಲ್ಲಿ ಅಪಾರ ಅನುಭವ ಪಡೆದಿದ್ದಾರೆ. ಈ ಹಿಂದೆ ತಾಲೂಕು ಪತ್ರಕರ್ತ ಸಂಘದ ಉಪಾಧ್ಯಕ್ಷರಾಗಿದ್ದರು. ಹಂಪಿ ವಿವಿಯಲ್ಲಿ ಬುಡಕಟ್ಟು ವಿಭಾಗದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ  ವಿಷವನ್ನು ಆಳವಾಗಿ ಅಭ್ಯಸಿಸಿ ಗಮನ ಸೆಳೆದಿದ್ದಾರೆ. ಇದಲ್ಲದೆ ಪತ್ರಿಕೋದ್ಯಮದಲ್ಲಿ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಲು ಗೋರಕ್‌ಪುರದಲ್ಲಿ ನಡೆದ ರಾಷ್ಟ್ರೀಯ ಸಮ್ಮೇಳನದಲ್ಲಿ ಶಿಬಿರಾರ್ಥಿಯಾಗಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.