ಸ್ವಾಮಿ ವಿವೇಕಾನಂದ ರಥಯಾತ್ರೆ, ವಿಶೇಷ ಸತ್ಸಂಗ ಕಾರ್ಯಕ್ರಮ
ಚಿಕ್ಕನಾಯಕನಹಳ್ಳಿ: ಏಳಿ ಎದ್ದೇಳಿ ಗುರಿಮುಟ್ಟುವವರೆಗು ನಿಲ್ಲದಿರಿ, ಒಂದೇ ವಿಷಯದ ಬಗ್ಗೆ ಒಂದೇ ದಿಕ್ಕಿನಲ್ಲಿ ಯೋಚಿಸುವ ನಾಲ್ಕು ಜನ ಯುವಕರನ್ನು ನನ್ನ ಕೈಗೆ ಕೊಡಿ, ಭಾರತದ ಚಿತ್ರಣವನ್ನೇ ಬದಲಿಸುತ್ತೇನೆ ಎಂದು ಸ್ವಾಮಿ ವಿವೇಕಾನಂದರು ಹಿಂದೆ ನುಡಿದಿದ್ದರು ಎಂದು ಸಾಹಿತಿ ಎಂ.ವಿ.ನಾರಾಜರಾವ್ ನುಡಿದರು.
ಮಂಗಳವಾರ ಅವರು ತಮ್ಮ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆಯ ಸಂಬಂಧ ಹಮ್ಮಿಕೊಂಡಿರುವ ರಥಯಾತ್ರೆ ಮತ್ತು ವಿಶೇಷ ಸತ್ಸಂಗ ಕಾರ್ಯಕ್ರಮದ ಬಗ್ಗೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ದೇಶವನ್ನು ಕಾಪಾಡಲು ಯುವಜನರಿಂದ ಮಾತ್ರ ಸಾಧ್ಯ ಎಂಬ ಅರಿವಿದ್ದ ವಿವೇಕಾನಂದರು, ವಿಶೇಷವಾಗಿ ಯುವಜನರ ಬಗ್ಗೆ ಮಾತುಗಳನ್ನು ಆಡಿದ್ದಾರೆ. ಅಂತಹ ವೀರಸನ್ಯಾಸಿ ಗತಿಸಿ ನೂರೈವತ್ತು ವರ್ಷಗಳಾಗಿವೆ. ಆದರೆ ಭಾರತದ ಚಿತ್ರಣವನ್ನು ಬದಲಿಸುವ ನಾಯಕತ್ವ ಭಾರತಕ್ಕೆ ಸಿಗದಿರುವುದು ಭಾರತೀಯರ ದುರ್ದೈವವಾಗಿದೆ. ಬರೀ ಅಹಿಂಸೆ ಎಂಬ ಪೊಳ್ಳು ವಾದವನ್ನು ಮುಂದಿಟ್ಟುಕೊಂಡು ನಮ್ಮ ರಾಜಕಾರಣಿಗಳು ವಿವೇಕಾನಂದರು ಕಂಡ ಯುವಭಾರತದ ಕನಸನ್ನು ನನಸಾಗಿಸುವಲ್ಲಿ ವಿಫಲರಾಗಿದ್ದಾರೆ. ಆದರೆ ವಿವೇಕಾನಂದರು ಅಂದು ನಡಿದ ವೀರವಾಣಿ ಇಂದಿಗೂ ಪ್ರಸ್ತುವಾಗಿದ್ದು, ಜುಲೈ 3ರಂದು ಮಧ್ಯಾನ್ನ ಪಟ್ಟಣದಲ್ಲಿ ವಿವೇಕಾನಂದರ 150ನೇ ವರ್ಷಾಚರಣೆ ಮತ್ತು ಭವ್ಯರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಸಂಜೆ 6ಗಂಟೆಗೆ ರೋಟರಿ ಬಾಲಭವನದಲ್ಲಿ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ಕಾರ್ಯಕ್ರಮದಲ್ಲಿ ತುಮಕೂರು ಶ್ರೀರಾಮಕೃಷ್ಣ-ವಿವೇಕಾನಂದ ಆಶ್ರಮದ ಶ್ರೀವೀರೇಶಾನಂದ ಸ್ವಾಮೀಜಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

