7 ರಂದು ಸಿರಿಧಾನ್ಯ ಮೇಳ
ತುಮಕೂರು: ಇಲ್ಲಿನ ಅಶೋಕ ರಸ್ತೆಯಲ್ಲಿರುವ ಎಂಪ್ರೆಸ್ ಬಾಲಕಿಯರ ಜೂನಿಯರ್ ಕಾಲೇಜು ಆವರಣದಲ್ಲಿ ಇದೇ ತಿಂಗಳ 7 ರಂದು ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ. ಸಿರಿಧಾನ್ಯ ಮೇಳದಲ್ಲಿ ಹೊಸ ತಲೆಮಾರಿನ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಕುತೂಹಲ ಆಸಕ್ತಿ ಮೂಡುಸುವುದು, ಹಳೆಯ ರೈತರಿಗೆ ಸಿರಿಧಾನ್ಯಗಳ ಬಗ್ಗೆ ನೆನಪು ಮರುಕಳಿಸುವ ಪ್ರಯತ್ನಗಳ ಉದ್ದೇಶ ಹೊಂದಲಾಗಿದೆ. ನಗರವಾಸಿಗಳಲ್ಲಿ ಸಿರಿಧಾನ್ಯಗಳು ಹೇಗೆ ಇರುತ್ತವೆ. ಅದರ ಮಹತ್ವವೇನು ಎಂಬುದನ್ನು ತಿಳಿಸಿ, ಅದನ್ನು ಉಳಿಸಿ ಮತ್ತು ಬಳಸುವ ಅವಶ್ಯಕತೆ ಮನಗಾಣುವ ಕಾರ್ಯವಾಗಿದೆ. ಸಿರಿಧಾನ್ಯಗಳ ಉತ್ಪಾದನಾ ತಾಂತ್ರಿಕತೆ, ಮೌಲ್ಯವರ್ಧನೆ, ಆರೋಗ್ಯದ ಲಾಭಗಳು ಹಾಗೂ ಮಾರುಕಟ್ಟೆ ಅವಕಾಶಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದರ ಜೊತೆಯಲ್ಲಿ ಸಿರಿಧಾನ್ಯಗಳ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿದೆ. ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ, ಸಂಶೋಧನಾ ಕೇಂದ್ರಗಳು, ಸರ್ಕಾರೇತರ ಸಂಸ್ಥೆಗಳು, ಸಿರಿಧಾನ್ಯ ಬೆಳೆಗಾರರ ಸಂಘಗಳು ಹಾಗೂ ಸಿರಿಧಾನ್ಯ ಬೆಳೆಯ ಬಗ್ಗೆ ಕಾಳಜಿ ಇರುವ ಸಮಾನ ಮನಸ್ಕರರು ಈ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಪಟೂರು ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಜಿ.ಎಂ. ಸುಜಿತ್ ತಿಳಿಸಿದ್ದಾರೆ.
ಇಂದು ಆಂಗ್ಲಭಾಷಾ ಪುನಶ್ಚೇತನ ಕಾರ್ಯಾಗಾರ
ತುಮಕೂರು: ತುಮಕೂರು ತಾಲೂಕಿನ ಎಲ್ಲ ಆಂಗ್ಲಭಾಷಾ ಪ್ರೌಡಶಾಲಾ ಸಹ ಶಿಕ್ಷಕರಿಗೆ ಇದೇ ತಿಂಗಳ 5 ರಂದು ತುಮಕೂರಿನ ಸಿದ್ದಗಂಗಾ ಮಠದ ವಸ್ತುಪ್ರದರ್ಶನದ ಆವರಣದಲ್ಲಿರುವ ಪ್ರೌಢಶಾಲಾ ವಿಭಾಗದಲ್ಲಿ ಆಂಗ್ಲಭಾಷಾ ಪುನಶ್ಚೇತನ ಕಾರ್ಯಾಗಾರವನ್ನು ಇಂಗ್ಲಿಷ್ ಟೀಚರ್ಸ್ ಫೋರಂ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯದರ್ಶಿ ಹೆಚ್.ಜಿ. ಹರೀಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

