11ರಂದು ವಿಧಾನಸೌಧ ಚಲೋ
ಕ.ಪ್ರ.ವಾರ್ತೆ ತುಮಕೂರು ಜು.5
ಸೇವಾ ಕಾಯಂಗೆ ಒತ್ತಾಯಿಸಿ ವಿವಿಧ ನಗರ-ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಸಾವಿರಾರು ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ರಾಜ್ಯ ಪುರಸಭೆ ಪೌರ ಕಾರ್ಮಿಕರ ಸಂಘ ಜು.11 ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿದೆ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಹ್ಮಣ್ಯ ತಿಳಿಸಿದರು.
ಈ ಸಂಬಂಧ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ನಗರಪಾಲಿಕೆ, ಮಹಾನಗರ ಪಾಲಿಕೆಗಳಲ್ಲಿ ಸ್ವಚ್ಛತೆಗಾಗಿ ದುಡಿಯುತ್ತಿರುವ
ಜಾಡಮಾಲಿಗಳು, ಕಸ ತುಂಬುವ, ಚರಂಡಿ ಸ್ವಚ್ಛಗೊಳಿಸುವವರು, ವಾಟರ್ಮ್ಯಾನ್ಗಳು, ಡ್ರೈವರ್ಗಳು, ಕಚೇರಿ ಸಹಾಯಕರು, ಕಂಪ್ಯೂಟರ್ ಆಪರೇಟರ್ಗಳು, ಮತ್ತಿತರೆ ಕೆಲಸಗಳಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ವರ್ಷಗಳಿಂದ ಸೇವಾ
ಕಾಯಂ ಇಲ್ಲದೆ ದುಡಿಯುತ್ತಲೇ ಇದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಕನಿಷ್ಠ ಸವಲತ್ತೂ ಇಲ್ಲ: ಈ ನಿಟ್ಟಿನಲ್ಲಿ ಇಂತಹ ಕಾರ್ಮಿಕರನ್ನು ಕೆಲಸದ ಭದ್ರತೆ, ಸಾಮಾಜಿತ ಭದ್ರತೆ, ಕಾರ್ಮಿಕರ ಕಾನೂನುಗಳ ಅಡಿಯಲ್ಲಿ ಸೌಲಭ್ಯ ನೀಡದೆ, ಕನಿಷ್ಠ ರಕ್ಷಣಾ ಸಾಮಗ್ರಿ ನೀಡದೆ, ಕೇವಲ 2 ರಿಂದ 3 ಸಾವಿರ ರು.ಗಳಿಗೆ ತಿಂಗಳೆಲ್ಲಾ ದುಡಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು.
ಗುತ್ತಿಗೆ ನಿಯಂತ್ರಣ ನಿಷೇಧ ಕಾಯ್ದೆಯಡಿ ನಿಯಮಾವಳಿಗಳ ಪ್ರಕಾರ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂಬ ನಿಯಮಾವಳಿ ಉಲ್ಲಂಘಿಸಲಾಗುತ್ತಿದೆ. ಕಾನೂನಿನ ಅನ್ವಯ ಹಾಗೂ ಸುಪ್ರೀಂಕೋರ್ಟ್ ತೀರ್ಪುಗಳಲ್ಲಿ ಮೂಲ ಕೆಲಸಗಳಲ್ಲಿ ಗುತ್ತಿಗೆ ಕಾರ್ಮಿಕ ನೇಮಕ ಅಸಂವಿಧಾನಿಕ ಎಂಬುದನ್ನು ಸ್ಪಷ್ಟವಾಗಿ ಹೇಳಿದೆ. ಇವುಗಳ ಉಲ್ಲಂಘನೆ ನಿರಂತರವಾಗಿ ನಡೆದಿದೆ. ಇದನ್ನು ಖಂಡಿಸಿ, ಸರ್ಕಾರ ಬರೀ ನಗರದ ಅಭಿವೃದ್ಧಿಗೆ ಗಮನ ನೀಡಿ, ಕೆಲಸ ಮಾಡುವ ಪೌರ ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಸುಬ್ರಹ್ಮಣ್ಯ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧ ಚಲೋ: ಹಲವು ವರ್ಷಗಳಿಂದ ಸೇವೆ ಕಾಯಂ ಆಗುತ್ತದೆ ಎಂಬ ಆಸೆ, ನಂಬಿಕೆಗಳೊಂದಿಗೆ ದುಡಿಯುತ್ತಿರುವ ಪೌರ ಕಾರ್ಮಿಕರು ತಮ್ಮ ಅಹವಾಲನ್ನು ಸರ್ಕಾರಕ್ಕೆ ಸಲ್ಲಿಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಜು.11ರಂದು ವಿಧಾನಸೌಧ ಚಲೋ ನಡೆಸುತ್ತಿದೆ. ಅಂದು ಬೆಳಗ್ಗೆ 11-30ಕ್ಕೆ ಮೆಜೆಸ್ಟಿಕ್ ರೇಲ್ವೆ ನಿಲ್ದಾಣದಿಂದ ಮೆರವಣಿಗೆ ಆರಂಭಗೊಳ್ಳಲಿದೆ ಎಂದು ಸುಬ್ರಹ್ಮಣ್ಯ ಮಾಹಿತಿ ನೀಡಿದರು.
ರಾಜ್ಯ ಖಜಾಂಚಿ ಸಿ.ವೆಂಕಟೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್, ರಾಜ್ಯ ಉಪಾಧ್ಯಕ್ಷ ಚಂದ್ರಪ್ಪ, ಜಿಲ್ಲಾ ಖಜಾಂಚಿ ಕೆ. ಮಂಜುನಾಥ್, ಸಂಘಟನಾ ಕಾರ್ಯದರ್ಶಿ ದೇವರಾಜು ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

