ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಿ: ಶಾಸಕ ಕೆ.ಎನ್. ರಾಜಣ್ಣ
ಮಧುಗಿರಿ: ಪಟ್ಟಣದ 4 ಕಿ.ಮೀ. ವ್ಯಾಪ್ತಿಯಲ್ಲಿ ಸಂಪೂರ್ಣ ಹಾಳಾಗಿ ಆಳುದ್ದ ಗುಂಡಿ ಬಿದ್ದಿರುವ ರಸ್ತೆಯನ್ನು ಸರಿಪಡಿಸಿ ಡಾಂಬರು ಹಾಕುವಂತೆ 234 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಜೆಎಂಸಿ ಗುತ್ತಿಗೆದಾರರಿಗೆ ಶಾಸಕ ಕೆ.ಎನ್.ರಾಜಣ್ಣ ತಾಕೀತು ಮಾಡಿದರು.
ಇತ್ತೀಚೆಗೆ ಅವರು ಮಧುಗಿರಿ ಪಟ್ಟಣದ ಪಾವಗಡ ವೃತ್ತದಲ್ಲಿ ಜೋಡಿ ರಸ್ತೆ ಕಾಮಗಾರಿ ಉದ್ಘಾಟಿಸಿ ಮಾತನಾಡಿದರು.
ಪಟ್ಟಣದ ವ್ಯಾಪ್ತಿ ಪ್ರದೇಶದ 4 ಕಿ.ಮೀ. ವರೆಗೆ ಆಳುದ್ದ ಗುಂಡಿ ಬಿದ್ದು ಪಟ್ಟಣದ ನಿವಾಸಿಗಳ ಮನೆಗೆ ಧೂಳು ವ್ಯಾಪಿಸಿ ಮನೆ ಮಂದಿಗೆ ವಿವಿಧ ರೋಗ ರುಜೀನಗಳು ಹರಡುತ್ತಿವೆ ಎಂದು ಸಾರ್ವಜನಿಕರು ಶಾಸಕರಲ್ಲಿ ಮನವಿ ಮಾಡಿದಾಗ ತಕ್ಷಣ ಜೆಎಂಸಿ ಗುತ್ತಿಗೆದಾರ ಮದನ್ ಅವರನ್ನು ಸ್ಥಳಕ್ಕೆ ಕರೆಸಿ ಪಟ್ಟಣದ ವ್ಯಾಪ್ತಿ ಪ್ರದೇಶದಲ್ಲಿ ಮೊದಲು ರಸ್ತೆ ಸರಿಪಡಿಸಿ ಡಾಂಬರು ಹಾಕುವಂತೆ ಸಲಹೆ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ದ್ವಾರಕನಾಥ್, ಮುಖಂಡ ಎಂ.ಜಿ.ಶ್ರೀನಿವಾಸಮೂರ್ತಿ, ಸೈಯದ್, ಪುರಸಭೆ ಸದಸ್ಯ ಅಯೂಬ್, ಅಲೀಂ,ಖುದ್ದುಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಜೆಎಂಸಿ ಗತ್ತಿಗೆದಾರ ಮದನ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

