ತುಮಕೂರು

ಸಿರಿಧಾನ್ಯ ಮೇಳದಲ್ಲಿ ಆಧುನಿಕ ಕೃಷಿ ಭಜನೆ

Published On :

ತುಮಕೂರು: ಅಪ್ಪಟ ದೇಸಿ ಕೃಷಿ ಮೇಳದಲ್ಲೂ ಆಧುನಿಕ ಕೃಷಿ ಭಜನೆ ನಡೆಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಪಂ ಸಿಇಓ ಗೋವಿಂದರಾಜು ಮಾತನಾಡಿ, ಮೊದಲಿಗೆ ರಾಗಿ ಸೇರಿದಂತೆ ಹಲವು ಸಿರಿಧಾನ್ಯಗಳ ಕುರಿತು ತಮ್ಮ ನೆನಪನ್ನು ಹಂಚಿಕೊಂಡರು. ನಂತರ ಆಧುನಿಕ ಕೃಷಿಯತ್ತ ಹೊರಳಿದರು. ಜಿಲ್ಲೆಯಲ್ಲಿ 12 ಲಕ್ಷ ಜನಸಂಖ್ಯೆ ಇದ್ದಾಗ 10 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಕೃಷಿ ನಡೆಯುತ್ತಿತ್ತು. ಈಗ ಜನಸಂಖ್ಯೆ 20 ಲಕ್ಷ ಮೀರಿದೆ. ಈಗಲೂ 10  ಲಕ್ಷ ಹೆಕ್ಟೇರ್ ಪ್ರದೇಶದಲ್ಲಷ್ಟೇ ಬೆಳೆ ಬೆಳೆಯಲಾಗುತ್ತಿದೆ. ಕಡಿಮೆ ನೀರು ಬಳಸಿ, ಹೆಚ್ಚು ಇಳುವರಿ ಕೊಡುವ ಬೆಳೆಗಳನ್ನು ಹೆಚ್ಚು-ಹೆಚ್ಚು ಬೆಳೆಯಬೇಕಿದೆ. ಇರುವ ಭೂಮಿಯಲ್ಲೇ ಹೆಚ್ಚು-ಹೆಚ್ಚು ಆಹಾರ ಬೆಳೆ
ಬೆಳೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ. ಹೀಗೆ ಮಾಡಲು ಆಧುನಿಕ ಕೃಷಿ ತಂತ್ರಜ್ಞಾನದಿಂದ ಸಾಧ್ಯ ಎಂದು ಗೋವಿಂದರಾಜು ಪ್ರತಿಪಾದಿಸಿದರು. ಈ ನಿಟ್ಟಿನಲ್ಲಿ ಸಂಶೋಧನಾ ಸಂಸ್ಥೆಗಳು, ಹೊಸ-ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವಂತೆ, ಬೀಜ ಅಭಿವೃದ್ಧಿ ಪಡಿಸುವತ್ತ ಗಮನ ಹರಿಸಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.