ತುಮಕೂರು

ಇಂದು ವಿಶ್ವ ಜನಸಂಖ್ಯಾ ದಿನ

Published On :

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಮತ್ತು ವಿವಿಧ ನರ್ಸಿಂಗ್ ಕಾಲೇಜುಗಳು, ತುಮಕೂರು ಸಂಯುಕ್ತ ಆಶ್ರಯದಲ್ಲಿ ಜು. 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಥಾ ಮತ್ತು ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ತುಮಕೂರು ನಗರ ಶಾಸಕ  ಡಾ. ರಫೀಕ್ ಅಹಮದ್ ಎಸ್. ಅವರು ಅಧ್ಯಕ್ಷತೆ  ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಸ್. ಬಸವರಾಜು, ಜಿ.ಪಂ. ಅಧ್ಯಕ್ಷೆ ಪ್ರೇಮ ಮಹಲಿಂಗಪ್ಪ, ವಿಧಾನಪರಿಷತ್ ಸದಸ್ಯರಾದ ಡಾ. ಎಂ.ಆರ್. ಹುಲಿನಾಯ್ಕರ್, ವೈ.ಎ. ನಾರಾಯಣಸ್ವಾಮಿ, ಡಾ. ಎ.ಹೆಚ್. ಶಿವಯೋಗಿಸ್ವಾವು, ಜಿ.ಪಂ. ಉಪಾಧ್ಯಕ್ಷೆ ಮಮತ ಶಿವಲಿಂಗಯ್ಯ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಬಿ. ಜಗದೀಶ್ ಅವರು ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ, ಸಿ.ಇ.ಓ. ಶ್ರೀ ಗೋವಿಂದರಾಜು ಅವರು ಭಾಗವಹಿಸುವರು. ಎಸ್.ಎಸ್.ಎಂ.ಸಿ. ಸಮುದಾಯ  ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಂ.ಎಸ್. ರಾಜಣ್ಣ ಅವರು ಅತಿಥಿ ಉಪನ್ಯಾಸ ನೀಡುವರು.
ಸಚಿವರ ಪ್ರವಾಸ ಕಾರ್ಯಕ್ರಮ
ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರು ಜುಲೈ 11 ರಂದು ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ  ಆಸ್ಪತ್ರೆ ಆವರಣ ಮತ್ತು ಗುಬ್ಬಿ ವೀರಣ್ಣ  ಕಲಾ ಮಂದಿರದಲ್ಲಿ ಏರ್ಪಡಿಸಿರುವ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 12 ಗಂಟೆಗೆ ತುಮಕೂರಿನಿಂದ ಬೆಂಗಳೂರಿಗೆ ತೆರಳುವರು.
14 ಕ್ಕೆ ಬ್ರಾಹ್ಮಣ ಸಂಘದ ಸಮಾವೇಶ
ಇಲ್ಲಿನ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾ ಭವನದಲ್ಲಿ ಇದೇ ತಿಂಗಳ 14 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬ್ರಾಹ್ಮಣ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸುವರು. ಮುಖ್ಯ ಅತಿಥಿಯಾಗಿ ಡಾ. ರಫೀಕ್ ಅಹಮದ್ ಆಗಮಿಸುವರು. ಮಾಜಿ ಶಾಸಕ ಬಿ.ಸಿ. ನಾಗೇಶ್ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ನಗರಸಭಾ ಸದಸ್ಯ ಎನ್.ಆರ್. ನಾಗರಾಜರಾವ್ ಆಗಮಿಸುವರು. ಅಧ್ಯಕ್ಷತೆಯನ್ನು ಪ್ರಭಾಕರ್ ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.